AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂನಂ ಪಾಂಡೆ ಐಡಿಯಾವನ್ನು ಕಾಪಿ ಮಾಡಿದ ಈ ಕಂಪೆನಿ, 100 ಉದ್ಯೋಗಿಗಳ ವಜಾದ ಹಿಂದಿದೆ ಅಸಲಿ ಕಹಾನಿ

ನೋಯ್ಡಾ ಮೂಲದ ಯೆಸ್ ಮೇಡಂ ಕಂಪನಿಯು 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿದೆ ಎಂಬ ಸುದ್ದಿ ವೈರಲ್ ಆಗಿತ್ತು. "ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಎದುರಿಸುತ್ತಿರುವ ಒತ್ತಡವನ್ನು ಎತ್ತಿ ತೋರಿಸುವ ಸಲುವಾಗಿ ಈ ನಿರ್ಧಾರಕ್ಕೆ ನಮ್ಮ ಸಂಸ್ಥೆ ಬಂದಿದೆ. ಯಾವುದೇ ಉದ್ಯೋಗಿಯನ್ನು ವಜಾಗೊಳಿಸಿಲ್ಲ. ಸುಳ್ಳು ಮಾಹಿತಿಯನ್ನು ಪ್ರಚಾರದ ಸಲುವಾಗಿ ಬಳಸಿದಕ್ಕೆ ಕ್ಷಮೆ ಇರಲಿ" ಎಂದು ಕಂಪನಿ ಹೇಳಿಕೊಂಡಿದೆ.

ಪೂನಂ ಪಾಂಡೆ ಐಡಿಯಾವನ್ನು ಕಾಪಿ ಮಾಡಿದ ಈ ಕಂಪೆನಿ, 100 ಉದ್ಯೋಗಿಗಳ ವಜಾದ ಹಿಂದಿದೆ ಅಸಲಿ ಕಹಾನಿ
Layoff Stunt
ಅಕ್ಷತಾ ವರ್ಕಾಡಿ
|

Updated on:Dec 10, 2024 | 6:44 PM

Share

ಇತ್ತೀಚಿಗಷ್ಟೆ ನಟಿ ಪೂನಂ ಪಾಂಡೆ ಗರ್ಭ ಕಂಠ ಕ್ಯಾನ್ಸರ್​ಗೆ ಬಲಿಯಾಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿತ್ತು, ಇದಾದ ಮರುದಿನ ನಟಿ ಪೂನಂ ಬದುಕಿರುವುದಾಗಿ ಸತ್ಯ ಹೊರಬಂದಿದ್ದು, ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರೂ ಕೂಡ ಈಕೆಯಿಂದಾಗಿ ಸಾಕಷ್ಟು ಜನರಿಗೆ ಗರ್ಭ ಕಂಠ ಕ್ಯಾನ್ಸರ್ ಎಷ್ಟು ಅಪಾಯಕಾರಿ ಅನ್ನೋದು ಮನವರಿಕೆಯಾಗಿತ್ತು. ಇದೀಗ ಇದೇ ರೀತಿ ಯೆಸ್ ಮೇಡಂ ಕಂಪನಿ ಪ್ರಚಾರಕ್ಕಾಗಿ ಮಾಡಿದ ಸ್ಟಂಟ್ ಒಂದು ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗುತ್ತಿದೆ.

ಮನೆಯಲ್ಲಿ ಸಲೂನ್ ಸೇವೆಗಳನ್ನು ಒದಗಿಸುವ ನೋಯ್ಡಾ ಮೂಲದ ಯೆಸ್‌ಮ್ಯಾಡಮ್ ಕಂಪನಿಯು ಇಮೇಲ್ ಮೂಲಕ 100 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾ ಮಾಡಿರುವುದಾಗಿ ಸುದ್ದಿ ಹರಿದಾಡಿತ್ತು. ಮಾನಸಿಕ ಆರೋಗ್ಯ ಸಮೀಕ್ಷೆಯನ್ನು ನಡೆಸಿದ ನಂತರ, ಕಂಪನಿಯು ತೀವ್ರ ಒತ್ತಡದಲ್ಲಿದ್ದವರನ್ನು ಕೆಲಸದಿಂದ ತೆಗೆದುಹಾಕಿರುವುದಾಗಿ ವರದಿಯಾಗಿತ್ತು. ವಜಾಗೊಂಡ 100 ಮಂದಿಯಲ್ಲಿ ಯೆಸ್‌ಮೇಡಮ್‌ನ ಉದ್ಯೋಗಿಯೊಬ್ಬರು ಇಮೇಲ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಗಣೇಶನ ಚಿತ್ರವಿರುವ ಬಿಕಿನಿ ಮತ್ತು ಚಪ್ಪಲಿಗಳನ್ನು ಮಾರಾಟಕ್ಕೆ ಇಟ್ಟ ವಾಲ್‌ಮಾರ್ಟ್; ಪೋಸ್ಟ್​ ವೈರಲ್

ಈ ಕುರಿತು ವ್ಯಾಪಕವಾಗಿ ಚರ್ಚೆಯಾಗುತ್ತಿದ್ದಂತೆ ಯೆಸ್ ಮೇಡಂ ಕಂಪನಿ ಸೋಶಿಯಲ್​ ಮೀಡಿಯಾಗಳಲ್ಲಿ ಕ್ಷಮೆ ಯಾಚಿಸಿದ ಪೋಸ್ಟ್​ ಒಂದನ್ನು ಹಂಚಿಕೊಂಡಿದೆ. “ಜನರಲ್ಲಿ ಕ್ಷಮೆ ಕೇಳುತ್ತಿದ್ದೇವೆ. ನಾವು ಯಾರನ್ನೂ ಕೆಲಸದಿಂದ ವಜಾಗೊಳಿಸಿಲ್ಲ. ಮಾನಸಿಕ ಆರೋಗ್ಯ ಕೆಲಸಕ್ಕೆ ಎಷ್ಟು ಅಗತ್ಯವಾಗಿದೆ ಎಂಬುದನ್ನು ಅರಿವು ಮೂಡಿಸಲು ಹಾಗೂ ಕೆಲಸದ ಸ್ಥಳದಲ್ಲಿ ಉದ್ಯೋಗಿಗಳು ಎದುರಿಸುತ್ತಿರುವ ಒತ್ತಡವನ್ನು ಎತ್ತಿ ತೋರಿಸುವ ಸಲುವಾಗಿ ಈ ನಿರ್ಧಾರಕ್ಕೆ ನಮ್ಮ ಸಂಸ್ಥೆ ಬಂದಿದೆ. ಈ ಮೂಲಕ ನಮ್ಮ ಕಂಪೆನಿಯ ಹೊಸ ಪಾಲಿಸಿಯ ಕುರಿತು ಬಹಿರಂಗಪಡಿಸಲಿದ್ದೇವೆ. ಒತ್ತಡಕ್ಕೆ ಒಳಗಾದ ಉದ್ಯೋಗಿಗೆ 6 ದಿನಗಳ ರಜೆಯ ಜೊತೆಗೆ ಸಂಬಳವನ್ನೂ ಕಂಪನಿ ಪಾವತಿಸಲಿದೆ. ಜೊತೆಗೆ ಕಂಪನಿ ಕಡೆಯಿಂದ ಆ ಉದ್ಯೋಗಿಯ ಮನೆಗೆ ತೆರಳಿ ಸ್ಪಾ ಸೌಲಭ್ಯ ನೀಡಲಾಗುತ್ತದೆ. ಈ ಮೂಲಕ ಉದ್ಯೋಗಿಗಳ ಒತ್ತಡ ಕಡಿಮೆ ಮಾಡಲು ಎಲ್ಲಾ ಪ್ರಯತ್ನ ಮಾಡಲಾಗುತ್ತದೆ ” ಎಂದು ಹೇಳಿಕೊಂಡಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:41 pm, Tue, 10 December 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ