AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರತೆಮರಿಗಳಿಗೆ ಬಾಟಲಿಹಾಲು ಕುಡಿಸಿದ ಯೋಗಿ ಆದಿತ್ಯನಾಥ

Yogi Adityanath : ಗೋರಖ್‌ಪುರದ ಶಹೀದ್ ಅಶ್ಫಾಕ್ ಉಲ್ಲಾ ಖಾನ್ ಝೂಲಾಜಿಕಲ್ ಪಾರ್ಕ್​ಗೆ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಈ ಚಿರತೆಮರಿಗಳಿಗೆ ಭವಾನಿ ಮತ್ತು ಚಂಡಿ ಎಂದು ನಾಮಕರಣ ಮಾಡಿದ್ದಾರೆ.

ಚಿರತೆಮರಿಗಳಿಗೆ ಬಾಟಲಿಹಾಲು ಕುಡಿಸಿದ ಯೋಗಿ ಆದಿತ್ಯನಾಥ
Yogi Adityanath Feeds Milk to Leopard Cubs at Gorakhpur zoo
TV9 Web
| Edited By: |

Updated on:Oct 06, 2022 | 5:04 PM

Share

Trending :  ಯೋಗಿ ಆದಿತ್ಯನಾಥ ಬುಧವಾರ ಗೋರಖ್‌ಪುರದ ಶಹೀದ್ ಅಶ್ಫಾಕ್ ಉಲ್ಲಾ ಖಾನ್ ಝೂಲಾಜಿಕಲ್ ಪಾರ್ಕ್ ಮತ್ತು ಪಶುವೈದ್ಯಕೀಯ ಆಸ್ಪತ್ರೆಗೆ ರಾಜಕಾರಣಿ ಮತ್ತು ನಟ ರವಿ ಕಿಶನ್​ ಜೊತೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪಾರ್ಕ್‌ನಲ್ಲಿ ಚಿರತೆಮರಿಗಳಿಗೆ ಬಾಟಲಿಯಿಂದ ಹಾಲು ಕುಡಿಸಿ ಅವುಗಳಿಗೆ ಚಂಡಿ ಮತ್ತು ಭವಾನಿ ಎಂದು ನಾಮಕರಣ ಮಾಡಿದರು. ನಂತರ ಕಾನ್ಪುರದ ಮೃಗಾಲಯದಿಂದ ತಂದಿರುವ ಬಿಳಿಹುಲಿ ಮತ್ತು ಎರಡು ಹಿಮಾಲಯನ್ ಕಪ್ಪು ಕರಡಿಗಳನ್ನು ಮೃಗಾಲಯವಾಸಕ್ಕೆ ಅನುವು ಮಾಡಿಕೊಟ್ಟರು. ಆರಂಭದಲ್ಲಿ ಪಶುವೈದ್ಯರು ಬಾಟಲಿಯಿಂದ ಹಾಲು ಕುಡಿಸಲು ಪ್ರಯತ್ನಿಸಿದಾಗ ಮರಿ ಒಲವು ತೋರಿಸಲಿಲ್ಲ. ಆಗ ಪಶುವೈದ್ಯರು ಸಿಎಂ ಆದಿತ್ಯನಾಥ ಅವರ ಬಳಿಗೆ ಕರೆತಂದರು. ಅವರು ಕಿತ್ತಳೆ ಬಣ್ಣದ ರಬ್ಬರ್ ಕೈಗವಸುಗಳನ್ನು ಧರಿಸಿ ಚಿರತೆ ಮರಿಯನ್ನು ಎತ್ತಿಕೊಂಡು ಬಾಟಲಿಯಿಂದ ಹಾಲು ಕುಡಿಸಲು ಶುರು ಮಾಡಿದರು. ನಂತರ ಎರಡೂ ಚಿರತೆಗಳು ಸರಾಗವಾಗಿ ಹಾಲು ಕುಡಿದವು.

ಯುಪಿ ಸರ್ಕಾರದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. ನಂತರ ಮೃಗಾಲಯ ವೀಕ್ಷಣೆ ಸಂದರ್ಭದಲ್ಲಿ ಮೃಗಾಲಯದ ಅಧಿಕಾರಿಗಳು ಯೋಗಿ ಅವರಿಗೆ ಮೃಗಾಲಯದ ವೈಶಿಷ್ಟ್ಯವನ್ನು ವಿವರಿಸಿದರು. ಜೊತೆಗೆ ಪ್ರಾಣಿಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ನಂತರ ಆದಿತ್ಯನಾಥ್ ಸಭೆಯನ್ನು ಉದ್ದೇಶಿಸಿ ವನ್ಯಜೀವಿಗಳ ರಕ್ಷಣೆ ಮತ್ತು ಸಂರಕ್ಷಣೆಯ ಅನಿವಾರ್ಯತೆ ಮತ್ತು ಅಗತ್ಯದ ಬಗ್ಗೆ ಮಾತನಾಡಿ, ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಸೂಕ್ತ ಆರೈಕೆ, ಚಿಕಿತ್ಸೆಗಾಗಿ ಪಶುವೈದ್ಯರ ಪ್ರತ್ಯೇಕ ತಂಡದ ಅವಶ್ಯಕತೆ ಎಂದು ತಿಳಿಸಿದರು.

ಮೃಗಾಲಯದ ಅಧಿಕೃತ ವೆಬ್‌ಸೈಟ್ ಪ್ರಕಾರ ಇದು​ ಪೂರ್ವಾಂಚಲ ಪ್ರದೇಶದಲ್ಲಿ ಮೊದಲ ಮತ್ತು ಉತ್ತರ ಪ್ರದೇಶದಲ್ಲಿ ಮೂರನೇ ಪ್ರಾಣಿಶಾಸ್ತ್ರೀಯ ಉದ್ಯಾನವನವಾಗಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:02 pm, Thu, 6 October 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?