AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೆಲಸ ಕಳೆದುಕೊಂಡದ್ದು ನಷ್ಟಕ್ಕಿಂತ ಲಾಭವೇ ಹೆಚ್ಚು; ಭಾರತೀಯ ಯುವತಿ ಹೀಗೆನ್ನಲು ನೀಡಿದ ಕಾರಣ ಇಲ್ಲಿದೆ

ಸಂಬಳ ಎಷ್ಟೇ ಇರಲಿ ಕೈಯಲ್ಲೊಂದು ಕೆಲಸ ಇದ್ರೆ ಸಮಾಧಾನ. ಕೆಲಸ ಕಳೆದುಕೊಂಡಾಗ ಯಾರಿಗಾದ್ರೂ ಟೆನ್ಶನ್ ಆಗೋದು ಸಹಜ. ಆದರೆ ಕೆನಾಡದಲ್ಲಿ ನೆಲೆಸಿರುವ ಭಾರತೀಯ ಯುವತಿ ಕೆಲಸದಿಂದ ತೆಗೆದು ಹಾಕಿದ್ದು ನಷ್ಟಕ್ಕಿಂತ ಲಾಭವೇ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಯುವತಿಯ ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಕೆಲಸ ಕಳೆದುಕೊಂಡದ್ದು ನಷ್ಟಕ್ಕಿಂತ ಲಾಭವೇ ಹೆಚ್ಚು; ಭಾರತೀಯ ಯುವತಿ ಹೀಗೆನ್ನಲು ನೀಡಿದ ಕಾರಣ ಇಲ್ಲಿದೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Oct 13, 2026 | 1:54 PM

Share

ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಕೆಲಸ (job) ಗಿಟ್ಟಿಸಿಕೊಳ್ಳೋದು ಸವಾಲಾದ್ರೆ, ಅದನ್ನು ಉಳಿಸಿಕೊಳ್ಳೋದು ಮತ್ತೊಂದು ರೀತಿಯ ತಲೆ ನೋವು. ಏಕಾಏಕಿ ಕಂಪನಿ ಕೆಲಸದಿಂದ ವಜಾಗೊಳಿಸಿದ್ರೆ ಮುಂದೇನು ಎಂಬ ಪ್ರಶ್ನೆ ಕಾಡುತ್ತದೆ. ಆದರೆ, ಕೆಲಸ ಕಳೆದುಕೊಂಡ 10 ತಿಂಗಳ ನಂತರ ಭಾರತೀಯ ಯುವತಿ ತನ್ನ ಅನುಭವ ಹಂಚಿಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡಿರುವುದು ನನಗೆ ಆಶೀರ್ವಾದ.  ಉದ್ಯೋಗ ನಷ್ಟವು 9 ರಿಂದ 5 ರ ಆಚೆಗಿನ ಜೀವನವನ್ನು ಪುನರ್ವಿಮರ್ಶಿಸುವಂತೆ ಮಾಡಿತು ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟು ಹಾಕಿದೆ.

ಕೆಲಸ ಕಳೆದುಕೊಂಡದ್ದು ನಷ್ಟಕ್ಕಿಂತ ಲಾಭವೇ ಹೆಚ್ಚು

ಸೆಮಿನಿ ಕುಲತಿಲಕೆ (Buildwealthwithsemini) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್ ನಲ್ಲಿ ಕೆಲಸದಿಂದ ವಜಾಗೊಳಿಸುವುದರಿಂದಾಗುವ ಲಾಭಗಳ ಬಗ್ಗೆ ಮಾತನಾಡೋಣ. ನನ್ನನ್ನು ಕೆಲಸದಿಂದ ತೆಗೆದುಹಾಕಿದಾಗ ಸಹಜವಾಗಿ ನಾನು ಭಯಭೀತಳಾಗಿದ್ದೆ ಹಾಗೂ ಗೊಂದಲಕ್ಕೊಳಗಾಗಿದ್ದೆ. ನನ್ನ ಜೀವನವನ್ನು ಪ್ರಶ್ನಿಸಲು ಪ್ರಾರಂಭಿಸಿದೆ ಎಂದಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ನನ್ನ ನಾನು ಕಂಡುಕೊಳ್ಳಲು ಅವಕಾಶ ಸಿಕ್ತು

ನಾನು ಕೆನಾಡದ ಅತ್ಯಂತ ದುಬಾರಿ ನಗರಗಳಲ್ಲಿ ಒಂದರಲ್ಲಿ ವಾಸಿಸುತ್ತಿದ್ದೆ. ಹಲವಾರು ಆರ್ಥಿಕ ಜವಾಬ್ದಾರಿಗಳು ನನ್ನ ಹೆಗಲ ಮೇಲಿತ್ತು. ಮದುವೆಗೆ ತಯಾರಿ ನಡೆಸುತ್ತಿದ್ದಾಗ ನನ್ನ ನಿಯಮಿತ ಆದಾಯದ ಮೂಲವು ಇದ್ದಕ್ಕಿದ್ದಂತೆ ಕಣ್ಮರೆಯಾಯಿತು. ಕೆಲಸ ಕಳೆದುಕೊಳ್ಳುವುದರಿಂದ ವರ್ಷಗಳ ಕಾಲ ತನಗೆ ಸಿಗದಿದ್ದ ಒಂದು ಅವಕಾಶ ಸಿಕ್ಕಿತು. ಜೀವನದಿಂದ ತಾನು ನಿಜವಾಗಿಯೂ ಏನನ್ನು ಬಯಸುತ್ತಿದ್ದೇನೆ ಎಂಬ ಬಗ್ಗೆ ಯೋಚಿಸಲು ಸಾಧ್ಯವಾಯ್ತು ಎಂದು ಹೇಳಿದ್ದಾರೆ.

ವೈಯುಕ್ತಿಕ ಜೀವನಕ್ಕೆ ಆದ್ಯತೆ ನೀಡಲು ಸಾಧ್ಯವಾಯ್ತು

ಕೆಲಸ ಕಳೆದುಕೊಂಡ ಬಳಿಕ ವೈಯಕ್ತಿಕ ಜೀವನದ ಕೆಲ ವಿಷ್ಯಗಳ ಮೇಲೆ ಗಮನಹರಿಸಲು ಅವಕಾಶ ಸಿಕ್ಕಿತು. ಇಲ್ಲದಿದ್ದರೆ ವೈಯುಕ್ತಿಕ ಬದುಕಿಗೆ ಆದ್ಯತೆ ನೀಡಲು ಕಷ್ಟವಾಗುತ್ತಿತ್ತು. ಈ ಅವಧಿಯಲ್ಲಿ ಮದುವೆಯಾದೆ, ಶ್ರೀಲಂಕಾ ಹಾಗೂ ಭಾರತಕ್ಕೆ ಪ್ರಯಾಣ ಬೆಳೆಸಿದೆ. ಅತ್ತೆ-ಮಾವಂದಿರನ್ನು ಭೇಟಿಯಾದೆ ಹಾಗೂ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆದೆ. ಇಮೇಲ್ ಮೂಲಕ ಯಾರೂ ನನ್ನಿಂದ ಕಸಿದುಕೊಳ್ಳಲು ಸಾಧ್ಯವಾಗದ ಆದಾಯದ ಮೂಲವನ್ನು ನಿರ್ಮಿಸುವತ್ತ ಗಮನ ಹರಿಸಿದೆ. ಆರಂಭದಲ್ಲಿ ದೊಡ್ಡ ಹಿನ್ನಡೆಯಂತೆ ಭಾಸವಾದ ಅನುಭವವು ತಾನು ವರ್ಷಗಳಿಂದ ಬಯಸುತ್ತಿದ್ದ ಜೀವನವನ್ನು ಸೃಷ್ಟಿಸಲು ಸಾಧ್ಯವಾಯ್ತು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಒತ್ತಡವಿದ್ರೂ ಜಾಬ್ ರಿಸೈನ್ ಮಾಡದ ಉದ್ಯೋಗಿ, ಕಾರಣ ತಿಳಿದ್ರೆ ನೀವು ಶಾಕ್ ಆಗ್ತೀರಾ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕೆಲ್ಸ ಕಳೆದುಕೊಳ್ಳೋದು ಭಯಾನಕ, ಆದರೆ ಜೀವನದ ಬಗ್ಗೆ ಸ್ಪಷ್ಟತೆ ಸಿಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ಮಾತು ನಿಜ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ, ಎಲ್ಲರ ದೃಷ್ಟಿಕೋನ ಒಂದೇ ತರಹ ಇರಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Tue, 13 October 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ