AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರಸ್ತೆ ಡಿವೈಡರ್‌ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ; ವ್ಯಕ್ತವಾಯ್ತು ಭಾರೀ ಆಕ್ರೋಶ

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ತೀರಾ ಕೆಳಮಟ್ಟಕ್ಕೆ ಇಳಿದು ಅರೆಬರೆ ಬಟ್ಟೆ ತೊಟ್ಟು ರೀಲ್ಸ್‌, ವಿಡಿಯೋ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇಲ್ಲೊಬ್ಬಳು ಯುವತಿ ಸಾರ್ವಜನಿಕ ಸ್ಥಳದಲ್ಲಿಯೇ ಇಂತಹ ಹುಚ್ಚಾಟಕ್ಕೆ ಕೈ ಹಾಕಿದ್ದು, ತುಂಡುಡುಗೆ ತೊಟ್ಟು ರಸ್ತೆ ಡಿವೈಡರ್‌ ಮೇಲೆ ನಿಂತು ಅಸಭ್ಯವಾಗಿ ನೃತ್ಯ ಮಾಡಿದ್ದಾಳೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವ ಇಂತಹ ಲಜ್ಜೆಗೆಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

Viral: ರಸ್ತೆ ಡಿವೈಡರ್‌ ಮೇಲೆ ನಿಂತು ಯುವತಿಯ ಅಸಭ್ಯ ನೃತ್ಯ; ವ್ಯಕ್ತವಾಯ್ತು ಭಾರೀ ಆಕ್ರೋಶ
ವೈರಲ್​​ ವಿಡಿಯೋ ( ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿರುವ ಯುವತಿಯ ಡ್ಯಾನ್ಸ್ )
ಮಾಲಾಶ್ರೀ ಅಂಚನ್​
| Edited By: |

Updated on: Dec 07, 2024 | 5:46 PM

Share

ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಿತಿ ಮೀರಿ ವರ್ತಿಸುವುದು ಸರಿಯಲ್ಲ. ಈ ವಿಷಯ ಗೊತ್ತಿದ್ದರೂ ಕೂಡಾ ಕೆಲವೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಲಂಗು ಲಗಾಮಿಲ್ಲದೆ ಅಸಭ್ಯ ರೀತಿಯ ವರ್ತನೆಯನ್ನು ತೋರುತ್ತಿರುತ್ತಾರೆ. ಇದಕ್ಕೆ ಉದಾಹರಣೆಯಂತಿರುವ ಸಾಕಷ್ಟು ಘಟನೆಗಳು ಈ ಹಿಂದೆಯೂ ಕೂಡಾ ನಡೆದಿವೆ. ಮೊನ್ನೆಯಷ್ಟೇ ರೂಪದರ್ಶಿಯೊಬ್ಬಳು ಬರೀ ಬಾತ್‌ ಟವೆಲ್‌ ಸುತ್ತಿ ಇಂಡಿಯಾ ಗೇಟ್‌ ಬಳಿ ಡ್ಯಾನ್ಸ್‌ ಮಾಡಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಳು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಓರ್ವ ಯುವತಿ ತುಂಡುಡುಗೆ ತೊಟ್ಟು ರಸ್ತೆ ಡಿವೈಡರ್‌ ಮೇಲೆ ನಿಂತು ಅಸಭ್ಯವಾಗಿ ನೃತ್ಯ ಮಾಡಿದ್ದಾಳೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ತೋರುವ ಇಂತಹ ಲಜ್ಜೆಗೆಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಅಕ್ಕಪಕ್ಕದ ರಸ್ತೆಯಲ್ಲಿ ನಿರಂತರವಾಗಿ ವಾಹನಗಳು ಸಂಚರಿಸುತ್ತಿದ್ದರೂ, ಇದಕ್ಕೆಲ್ಲಾ ಕ್ಯಾರೇ ಅನ್ನದೆ ಓರ್ವ ಯುವತಿ ತುಂಡುಡುಗೆ ತೊಟ್ಟು ರಸ್ತೆ ಡಿವೈಡರ್‌ ಮೇಲೆ ಮೈ ಚಳಿ ಬಿಟ್ಟು ಅಸಭ್ಯ ರೀತಿಯಲ್ಲಿ ಮುಜ್ರಾ ಡ್ಯಾನ್ಸ್‌ ಮಾಡಿದ್ದಾಳೆ.

ಈ ಕುರಿತ ವಿಡಿಯೋವನ್ನು venom1s ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಆಕೆ ಜನರನ್ನು ವಿಚಲಿತಗೊಳಿಸುತ್ತಿದ್ದಾಳೆ, ಇದರಿಂದ ರಸ್ತೆ ಅಪಘಾತಗಳು ಸಹ ಉಂಟಾಗಬಹುದು; ಆದಷ್ಟು ಬೇಗ ಮುಜ್ರಾ ನೃತ್ಯವನ್ನು ನಿಷೇಧಿಸಿ” ಎಂಬ ಶೀರ್ಷಿಕೆ ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕೆಂಪು ಬಣ್ಣದ ತುಂಡುಡುಗೆ ತೊಟ್ಟ ಯುವತಿ ರಸ್ತೆ ಡಿವೈಡರ್‌ ಮೇಲೆ ನಿಂತು ಸಾರ್ವಜನಿಕವಾಗಿ ಅಸಭ್ಯ ರೀತಿಯಲ್ಲಿ ನೃತ್ಯ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಡಿವೋರ್ಸ್‌ ಪಡೆದು ಬರೋಬ್ಬರಿ 50 ವರ್ಷಗಳ ಬಳಿಕ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ವಿಚ್ಛೇದಿತ ದಂಪತಿ

ಡಿಸೆಂಬರ್‌ 06 ರಂದು ಹಂಚಿಕೊಳ್ಳಲಾದ ಈ ವಿಡಿಯೋ 61 ಸಾವಿರ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಿಜಕ್ಕೂ ಇದು ತುಂಬಾ ಅಸಭ್ಯವಾಗಿದೆ. ಇದಕ್ಕೆ ಯಾವುದೇ ಕಾನೂನು ಕ್ರಮ ಇಲ್ಲವೇʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದೇನಾ ಮಹಿಳಾ ಸಬಲೀಕರಣʼ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇನ್ನೂ ಅನೇಕರು ಈಕೆಯ ವರ್ತನೆಗೆ ಗರಂ ಆಗಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ