AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ನಿಲ್ದಾಣದಲ್ಲಿ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ

ಬಸ್ಸು, ರೈಲು, ಮೆಟ್ರೋಗಳಲ್ಲಿ ಪ್ರೇಮಿಗಳ ರೋಮ್ಯಾನ್ಸ್ ಸೇರಿದಂತೆ ಇನ್ನಿತರ ವಿಚಾರಗಳಿಂದ ಸುದ್ದಿಯಾಗುವುದೇ ಹೆಚ್ಚು. ಅದರಲ್ಲಿಯೂ ಈ ಸೋಶಿಯಲ್ ಮೀಡಿಯಾದಲ್ಲಿ ಪ್ರೇಮಿಗಳಿಗೆ ಸಂಬಂಧಿಸಿದ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೋರ್ವ ತನ್ನ ಪ್ರೇಯಸಿಯ ಪಾದಗಳನ್ನು ಸ್ಪರ್ಶಿಸಿ ನಮಸ್ಕರಿಸಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ
ವೈರಲ್ ವಿಡಿಯೋImage Credit source: Twitter
ಸಾಯಿನಂದಾ
|

Updated on: Apr 29, 2025 | 5:49 PM

Share

ಪ್ರೀತಿ (love) ಯೇ ಹಾಗೆ, ಒಮ್ಮೆ ಪ್ರೀತಿಯಲ್ಲಿ ಬಿದ್ದರೆ ಈ ಜಗತ್ತೇ ಕಾಣುವುದಿಲ್ಲ. ಪ್ರೇಮಿಗಳು ತನ್ನನ್ನು ಪ್ರೀತಿಸುವ ಜೀವದ ಖುಷಿಗಾಗಿ ಏನು ಬೇಕಾದರೂ ಕೂಡ ಮಾಡಿಬಿಡುತ್ತಾರೆ. ಅದರಲ್ಲಿಯೂ ಈ ಹುಡುಗ ಪ್ರಾಮಾಣಿಕವಾಗಿ ಪ್ರೀತಿಸುತ್ತಿದ್ದರೆ ತನ್ನವಳಿಗಾಗಿ ಏನನ್ನು ಬೇಕಾದರೂ ಮಾಡಲು ಸಿದ್ಧವಿರುತ್ತಾನೆ. ಇದೀಗ ಪ್ರೇಮಿಯೊಬ್ಬನು ಮೆಟ್ರೋ ನಿಲ್ದಾಣ (metro station) ದಲ್ಲಿ ತನ್ನ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Satendra prathap ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ‘ಅಖಿಲ ಭಾರತ ಖಾಂತಿ ಮರ್ದ್ ಅಸೋಸಿಯೇಶನ್‌ನ ರಾಷ್ಟ್ರೀಯ ಅಧ್ಯಕ್ಷನಾಗಿರುವ ನಾನುಈ ಯುವಕನ ಪುರುಷ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತೇನೆ. ಈ ಯುವಕನು ಗಂಡಸು ಜಾತಿಗೆ ಅವಮಾನ. ಈ ಪುರುಷರ ಸಂಘದಿಂದ ಈತನನ್ನು ಅಮಾನತ್ತುಗೊಳಿಸಬೇಕೆಂದು ಅಗ್ರಹಿಸುತ್ತೇನೆ. ಇಂತಹ ಯುವಕರು ನಮ್ಮ ಪುರುಷ ಸಮಾಜಕ್ಕೆ ಕಳಂಕ. ಇಂದು ಆಕೆಯ ಕಾಲಿಗೆ ನಮಸ್ಕರಿಸಿದ್ದಾನೆ. ನಾಳೆ ಆಕೆಯ ಕೈ-ಕಾಲುಗಳನ್ನು ಒತ್ತುತ್ತಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ
Image
ಮನೆಗೆ ಬಂತು ಹೊಸ ಫ್ಯಾನ್, ಮನೆ ಮಂದಿಯ ಸಂಭ್ರಮ ನೋಡಿ
Image
ಆಟೋ ಬಳಸಿ ಗದ್ದೆ ಉಳುಮೆ ಮಾಡಿದ ವ್ಯಕ್ತಿ, ವಿಡಿಯೋ ವೈರಲ್
Image
ಇದೆಂಥಾ ಹುಚ್ಚಾಟ, ಮರದ ತುತ್ತ ತುದಿಯಲ್ಲಿ ನಿಂತು ಮಹಿಳೆಯ ಡಾನ್ಸ್

ಇದನ್ನೂ ಓದಿ : Viral : ಕನ್ನಡ ಭಾಷೆ ಗೊತ್ತಿಲ್ಲ, ಚಾಟ್ ಜಿಪಿಟಿ ಬಳಸಿ ಆಟೋ ಚಾಲಕನ ಜೊತೆಗೆ ಚೌಕಾಸಿ ಮಾಡಿದ ಯುವಕ

ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲಿರುವ ಕಟ್ಟೆಯಲ್ಲಿ ಯುವಕನು ಕುಳಿತುಕೊಂಡಿರುವುದನ್ನು ಕಾಣಬಹುದು. ಎದುರಿಗೆ ಆತನ ಪ್ರೇಯಸಿಯೂ ನಿಂತುಕೊಂಡಿದ್ದು ಆತನು ಆಕೆಯ ಪಾದಗಳನ್ನು ಮೂರು ಸಲ ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಕೆಲ ನಿಮಿಷಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕೋಣೆಯಲ್ಲಿ ಕೈಯಲ್ಲಿ ಕ್ಯಾಂಡಿ ಹಿಡಿದುಕೊಂಡಿರುವ ಈ ಯುವತಿಯೂ ಕುಣಿಯುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಈ ವಿಡಿಯೋ ಈಗಾಗಲೇ 283.2 ಕೆ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ಬಳಕೆದಾರrರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಈಗಲೇ ಈ ಯುವಕನ ಪರಿಸ್ಥಿತಿ ನೋಡಲಾಗುತ್ತಿಲ್ಲ, ಮದುವೆಯಾದ ಮೇಲೆ ಈ ಯುವಕನಿಗೆ ದೇವರೇ ಗತಿ’ ಎಂದಿದ್ದಾರೆ. ಇನ್ನೊಬ್ಬರು, ‘ಹೆಣ್ಣು ಗಂಡು ಸಮಾನರು ಎಂದ ಮೇಲೆ ಪಾದ ಮುಟ್ಟಿ ಸ್ಪರ್ಶಿಸುವುದರಲ್ಲಿ ಏನು ತಪ್ಪಿಲ್ಲ. ಪ್ರೀತಿಯಲ್ಲಿ ಇಬ್ಬರೂ ಸೋಲಬೇಕು. ಆಗ ಮಾತ್ರ ಈ ಪ್ರೀತಿಯೂ ಉಳಿಯಲು ಸಾಧ್ಯ’ ಎಂದಿದ್ದಾರೆ. ಮತ್ತೊರ್ವ ಬಳಕೆದಾರ, ‘ಅಣ್ಣ ಅವನು ಅವಳಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ. ಆಗಿದ್ದಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಇಲ್ಲದಿದ್ದರೆ ದಿನಾಲೂ ಆಕೆಯೊಂದಿಗೆ ಕಿತ್ತಾಡಿ ಸಾಯಬೇಕಾಗುತ್ತದೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್