AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಧ್ಯರಾತ್ರಿ ಊಟ ಕದ್ದು ತಿನ್ನುವಾಗ್ಲೇ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವಕ

ಮಕ್ಕಳು ಎದೆಯೆತ್ತರ ಬೆಳೆದು ನಿಂತಿದ್ರು ತಾಯಿಗೆ ಯಾವತ್ತಿದ್ರೂ ಪುಟ್ಟ ಮಗುನೇ. ಹೆತ್ತವರ ಮುಂದೆ ಸಣ್ಣ ಮಕ್ಕಳಂತೆ ಮಾಡುವ ವಿಡಿಯೋಗಳನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಇಲ್ಲೊಬ್ಬ ಯುವಕನು ಅಮ್ಮನ ಜತೆಗೆ ಜಗಳ ಮಾಡಿ ಊಟ ಬಿಟ್ಟಿದ್ದಾನೆ. ಆದ್ರೆ ಮಧ್ಯರಾತ್ರಿ ಕದ್ದು ಊಟ ಮಾಡುತ್ತಿದ್ದಾಗ ತನ್ನ ತಾಯಿಯ ಕೈಯಲ್ಲೇ ಸಿಕ್ಕಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಧ್ಯರಾತ್ರಿ ಊಟ ಕದ್ದು ತಿನ್ನುವಾಗ್ಲೇ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವಕ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Jul 13, 2026 | 1:21 PM

Share

ಬೆಳೆದು ಎಷ್ಟೇ ದೊಡ್ಡವರಾದ್ರೂ ಪುಟಾಣಿ ಮಕ್ಕಳಂತೆ (little kids) ಅಮ್ಮನ ಜತೆಗೆ ಕೋಪಿಸಿಕೊಳ್ಳುತ್ತೇವೆ. ಸಣ್ಣ ಪುಟ್ಟ ವಿಷ್ಯಕ್ಕೆ ಹಠ ಹಿಡಿಯುತ್ತೇವೆ. ಊಟ ತಿಂಡಿ ಬಿಟ್ಟು ಮನೆಯಲ್ಲಿ ಸಣ್ಣದೊಂದು ಧರಣಿ ಮಾಡುತ್ತೇವೆ. ಈ ಯುವಕನದ್ದು ಅದೇ ಕಥೆ. ಅಮ್ಮ ಜತೆಗೆ ಜಗಳ ಮಾಡಿ ಊಟ ಬಿಟ್ಟಿದ್ದಾನೆ. ಕೊನೆಗೆ ಹಸಿವು ತಾಳಲಾರದೇ ಮಧ್ಯರಾತ್ರಿ 2 ಗಂಟೆಗೆ ಅಡುಗೆ ಮನೆಗೆ ಹೋಗಿ ಕದ್ದು ತಿಂದಿದ್ದಾನೆ. ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಗಮನ ಸೆಳೆದಿದೆ.

ಅಲ್‌ ವರ್ಲ್ಡ್ (all world) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಅಮ್ಮನ ಜತೆಗೆ ಜಗಳ ಮಾಡಿಕೊಂಡು ರಾತ್ರಿ ಊಟ ಬಿಟ್ಟಿದ್ದಾನೆ. ಹಸಿವು ತಾಳಲಾರದೇ ಮಧ್ಯರಾತ್ರಿ 2 ಗಂಟೆಗೆ ಅಡುಗೆ ಮನೆಯಲ್ಲಿ ಕದ್ದು ತಿನ್ನುವುದನ್ನು ಕಾಣಬಹುದು. ಇದೇ ವೇಳೆ ಈ ಯುವಕನ ತಾಯಿ ಮೆಲ್ಲನೆ ಅಡುಗೆ ಮನೆಯತ್ತ ಬಂದಿದ್ದಾಳೆ. ಈ ವಿಡಿಯೋದ ಕೊನೆಗೆ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದಿದ್ದು ಇಬ್ಬರೂ ಮುಖ ಮುಖ ನೋಡಿಕೊಂಡು ನಗುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ

ಈ ವಿಡಿಯೋ ಒಂದು ಲಕ್ಷ ಎಪ್ಪತ್ತೈದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಆ ನಗುವೇ ಎಲ್ಲವನ್ನು ಹೇಳುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಾನು ಹೀಗೆಯೇ ಮಾಡುವೆ ಎಂದಿದ್ದಾರೆ. ಮತ್ತೊಬ್ಬರು, ರೋಲ್, ಕ್ಯಾಮೆರಾ, ಆಕ್ಷನ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:03 pm, Mon, 13 July 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ