Video: ಮನೆಗೆ ಮರಳುತ್ತಿದ್ದಂತೆ ಅಜ್ಜಿಯನ್ನು ಕಂಡು ಕುಣಿದು ಕುಪ್ಪಳಿಸಿದ ಯುವಕ

ಕೆಲವೊಮ್ಮೆ ತಮಗಾಗುವ ಸಂತೋಷವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಕೆಲವರು ಅದನ್ನು ಮಾತಿನಲ್ಲಿ ಹೇಳಿದರೆ, ಇನ್ನು ಕೆಲವರು ತಮ್ಮ ನಡೆ ನುಡಿಯಲ್ಲಿ ವ್ಯಕ್ತಪಡಿಸುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಯುವಕನು ಮನೆಗೆ ಮರಳುತ್ತಿದ್ದಂತೆ ಅಜ್ಜಿಯನ್ನು ಕಂಡು ಕುಣಿದು ಕುಪ್ಪಳಿಸಿದ್ದಾನೆ. ಈ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮನೆಗೆ ಮರಳುತ್ತಿದ್ದಂತೆ ಅಜ್ಜಿಯನ್ನು ಕಂಡು ಕುಣಿದು ಕುಪ್ಪಳಿಸಿದ ಯುವಕ
ವೈರಲ್‌ ವಿಡಿಯೋ
Image Credit source: Twitter

Updated on: Jul 26, 2026 | 12:21 PM

ಅಜ್ಜ ಅಜ್ಜಿಗೆ (grandparents) ಮೊಮ್ಮಕ್ಕಳೆಂದರೆ ಜೀವಕ್ಕಿಂತ. ಮೊಮ್ಮಕ್ಕಳನ್ನು ಕಂಡರೆ ಈ ಹಿರಿಜೀವಗಳು ಮಕ್ಕಳಂತೆ ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ಮೊಮ್ಮಗನು ಅಜ್ಜಿಯನ್ನು ಕಂಡೊಡನೆ ಕುಣಿದು ಕುಪ್ಪಳಿಸಿದ್ದಾನೆ. ಮನೆಗೆ ಮರಳುತ್ತಿದ್ದಂತೆ ಅಂಗಳದಲ್ಲಿ ನಿಂತಿದ್ದ ತನ್ನ ಪ್ರೀತಿಯ ಅಜ್ಜಿಯನ್ನು ಕಂಡು ಖುಷಿಯಲ್ಲಿ ಕುಣಿದಾಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಿಭ್ಯ ಶರ್ಮ (shibhya sharma) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಅಂಗಳದಲ್ಲಿ ಅಜ್ಜಿ ನಿಂತುಕೊಂಡಿರುವುದನ್ನು ಕಾಣಬಹುದು. ಕಾರಿನಿಂದ ಇಳಿದ ಯುವಕನೊಬ್ಬ ತನ್ನ ಅಜ್ಜಿಯನ್ನು ಕಂಡು ಕುಣಿಯಲು ಶುರು ಮಾಡಿದ್ದಾನೆ. ತನ್ನ ಖುಷಿಯನ್ನು ತಡೆಯಲಾಗದೆ ತನ್ನ ಪ್ರೀತಿಯ ಅಜ್ಜಿಯನ್ನು ತಬ್ಬಿಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಮೆರಿಕದ ಸಂಪತ್ತು ಬೇಡ, ಭಾರತದ ಮಣ್ಣು ಸಾಕು: ಭಾರತೀಯಳಾಗಿ ಸಾಯ್ತೀನಿ ಅಂದ 94 ವರ್ಷದ ವೃದ್ಧೆ

ಜುಲೈ 25 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಎರಡೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಶುದ್ಧ ಪ್ರೀತಿ ಎಂದು ಹೇಳಿದರೆ, ಮತ್ತೊಬ್ಬರು, ಹ್ಯಾಪಿ ಮೂವ್ಮೆಂಟ್ ಎಂದು ಹೇಳಿದ್ದಾರೆ. ಮತ್ತೊಬ್ಬರು, ಎಷ್ಟು ಸುಂದರ ಬಾಂಧವ್ಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us