AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತನ್ನ ಜತೆಗೆ ವಾಕಿಂಗ್‌ಗೆ ಬಂದ ಶ್ವಾನವನ್ನು ಮನೆಗೆ ಕರೆದೊಯ್ಯಲು ಹರಸಾಹಸ ಪಟ್ಟ ಯುವಕ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಕೆಲ ದೃಶ್ಯಗಳು ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಇಂತಹದ್ದೇ ದೃಶ್ಯ ವೈರಲ್ ಆಗಿದೆ. ಯುವಕನೊಬ್ಬ ವಾಕಿಂಗ್ ಕರೆದುಕೊಂಡು ಹೋದ ಶ್ವಾನವನ್ನು ಹಿಂತಿರುಗಿ ಮನೆಗೆ ಕರೆ ತರಲು ಹರಸಾಹಸ ಪಟ್ಟಿದ್ದಾನೆ. ಈ ವಿಡಿಯೋಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ ನೋಡಿ.

Video: ತನ್ನ ಜತೆಗೆ ವಾಕಿಂಗ್‌ಗೆ ಬಂದ ಶ್ವಾನವನ್ನು ಮನೆಗೆ ಕರೆದೊಯ್ಯಲು ಹರಸಾಹಸ ಪಟ್ಟ ಯುವಕ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 17, 2026 | 6:36 PM

Share

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಇವುಗಳು ಮನುಷ್ಯನ ಆಪ್ತ ಸ್ನೇಹಿತ ಅಂತಾನೇ ಹೇಳಬಹುದು. ಮನೆಯ ಸದಸ್ಯರಂತೆ ಇರುವ ಶ್ವಾನ ಮನೆಯ ಮಾಲೀಕರಿಗೆ ನಿಷ್ಠಾವಂತರಾಗಿರುತ್ತವೆ. ಇದೀಗ ಯುವಕನೊಬ್ಬ ಶ್ವಾನವನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗಿದ್ದಾನೆ. ಇದೇ ವೇಳೆ ಈ ಶ್ವಾನವು ತಾನು ಮನೆಗೆ ಬರಲ್ಲ ಎಂಬಂತೆ ಹಠ ಹಿಡಿದು ಕುಳಿತಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ವಿನಯ್ ರಾಠೋರೆ (Vinay Rathore) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಯುವಕನೊಬ್ಬ ಶ್ವಾನವನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗಿದ್ದಾನೆ. ಆದರೆ, ಶ್ವಾನವನ್ನು ಮನೆಗೆ ಕರೆದೊಯ್ಯಲು ಪ್ರಯತ್ನಿಸುತ್ತಿದ್ದಂತೆ ತಾನು ಮನೆಗೆ ಬರಲ್ಲ ಎಂಬಂತೆ ಹಠ ಹಿಡಿದು ಕುಳಿತುಕೊಂಡಿರುವುದನ್ನು ಕಾಣಬಹುದು. ಯುವಕನು ಶ್ವಾನದ ಎರಡು ಕಾಲುಗಳನ್ನು ಎತ್ತಿಕೊಂಡು ಮನೆಗೆ ಕರೆದೊಯ್ಯುತ್ತಿರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕಾಣೆಯಾದ ಸಾಕು ನಾಯಿ ಹುಡುಕಿಕೊಟ್ಟವರಿಗೆ 10,000 ರೂ ನಗದು ಬಹುಮಾನ ಘೋಷಿಸಿದ ಮಾಲೀಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಎಲ್ಲಾ ಶ್ವಾನಗಳ ಪರಿಸ್ಥಿತಿ ನನಗೆ ಅರ್ಥ ಆಗುತ್ತದೆ ಎಂದಿದ್ದಾರೆ. ಇನ್ನೊಬ್ಬರು, ದಯವಿಟ್ಟು ಈ ರೀತಿ ಪ್ರಾಣಿಗಳ ಜತೆಗೆ ನಡೆದುಕೊಳ್ಳಬೇಡಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ತುಂಬಾನೇ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Mon, 17 August 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ