AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹುಚ್ಚುತನದ ಪರಮಾವಧಿ, ಕರೆಂಟ್‌ ಕಂಬದ ಮೇಲೆ ನಿಂತು ರೀಲ್ಸ್‌ ಮಾಡಿದ ಯುವತಿ

ವಿಶೇಷವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ಜನ ತರಹೇವಾರಿ ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದೆರಲ್ಲೂ ಕೆಲವರು ಪ್ರಾಣವನ್ನೂ ಲೆಕ್ಕಿಸದೆ ವಿಡಿಯೋ ಮಾಡುವವರಿದ್ದಾರೆ. ಅದೇ ರೀತಿ ಇಲ್ಲೊಬ್ಳು ಯುವತಿ ಫೇಮಸ್‌ ಆಗೋಕೆ ಎಲೆಕ್ಟ್ರಿಕ್‌ ಕಂಬದ ಮೇಲೆ ನಿಂತು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಇಂತಹವರಿಗೆ ಕಠಿಣ ಶಿಕ್ಷೆ ಆಗ್ಬೇಕು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

Viral: ಹುಚ್ಚುತನದ ಪರಮಾವಧಿ, ಕರೆಂಟ್‌ ಕಂಬದ ಮೇಲೆ ನಿಂತು ರೀಲ್ಸ್‌ ಮಾಡಿದ ಯುವತಿ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 27, 2024 | 12:09 PM

Share

ಲೈಕ್ಸ್‌, ವೀವ್ಸ್‌, ಫಾಲೋವರ್ಸ್‌ ಗಳಿಸಲು, ರಾತ್ರೋರಾತ್ರಿ ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗಲು ಜನ ಹಲವಾರು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಅದರಲ್ಲೂ ಕೆಲವರು ಪ್ರಾಣವನ್ನೂ ಲೆಕ್ಕಿಸದೆ ಡೇಂಜರಸ್‌ ರೀಲ್ಸ್‌ಗಳನ್ನು ಮಾಡುವವರಿದ್ದಾರೆ. ಹೀಗೆ ಹುಚ್ಚಾಟ ಮೆರೆದು ಪಜೀತಿಗೆ ಸಿಲುಕಿದವರ, ಅಮೂಲ್ಯವಾದ ಜೀವವನ್ನೇ ಕಳೆದುಕೊಂಡವರ ಸುದ್ದಿಗಳನ್ನು ನೀವು ಕೇಳಿರುತ್ತೀರಿ ಅಲ್ವಾ. ಈ ರೀತಿ ಮಿತಿ ಮೀರಿ ವರ್ತಿಸುವುದು ಅಪಾಯ ಅಂತ ಗೊತ್ತಿದ್ರೂ ಕೂಡಾ ಇಲ್ಲೊಬ್ಬಳು ಯುವತಿ ಇದಕ್ಕೆಲ್ಲಾ ಕ್ಯಾರೇ ಅನ್ನದೆ ಎಲೆಕ್ಟ್ರಿಕ್‌ ಕಂಬದ ಮೇಲೆ ನಿಂತು ಡೇಂಜರಸ್‌ ರೀಲ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗ್ಬೇಕು ಎಂಬ ಉದ್ದೇಶದಿಂದ ಯುವತಿಯೊಬ್ಬಳು ಎಲೆಕ್ಟ್ರಿಕ್ ಕಂಬದ ಮೇಲೆ ಹತ್ತಿ ವಿದ್ಯುತ್‌ ತಂತಿಯನ್ನು ಹಿಡಿದು ರೀಲ್ಸ್‌ ಮಾಡಿದ್ದಾಳೆ. ಕಂಬದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಈ ಕುರಿತ ವಿಡಿಯೋವನ್ನು ChotaNewsTelugu ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಎಲೆಕ್ಟ್ರಿಕ್‌ ಕಂಬದ ಮೇಲೇರಿ ನಿಂತು ಯುವತಿಯೊಬ್ಬಳು ಡೇಂಜರಸ್‌ ರೀಲ್ಸ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಗೆಳತಿಗೆ 4BHK ಫ್ಲ್ಯಾಟ್‌, ಐಷಾರಾಮಿ ಕಾರ್‌ ಗಿಫ್ಟ್‌ ಕೊಟ್ಟ ತಿಂಗಳಿಗೆ 13 ಸಾವಿರ ಸಂಬಳ ಪಡೆಯುವ ಯುವಕ

ಡಿಸೆಂಬರ್‌ 25 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ಹುಚ್ಚುತನದ ಪರಮಾವಧಿʼ ಎಂದು ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕುʼ ಎಂದು ಆಗ್ರಹಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ