AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನನ್ನ ನೆಮ್ಮದಿಯನ್ನೇ ಕಳ್ಕೊಂಡಿದ್ದೇನೆ: ವರ್ಕ್‌ಲೈಫ್‌ ಬಗ್ಗೆ ಅಸಮಾಧಾನ ಹೊರಹಾಕಿದ ಯುವತಿ

ಕೆಲಸ ಅಂದ್ರೇನೆ ಹಾಗೆ, ಕತ್ತೆ ತರಹ ದುಡಿಬೇಕು. ಜಾಬ್ ಅನಿವಾರ್ಯ ಅನ್ನೋ ಕಾರಣಕ್ಕೆ ಎಲ್ಲವನ್ನು ಸಹಿಸಿಕೊಂಡು ಹೋಗ್ತಾರೆ. ಆದರೆ ಇಲ್ಲೊಬ್ಬಳು ಯುವತಿ ಕೆಲಸದಿಂದ ಬೇಸತ್ತು ಹೋಗಿದ್ದಾಳೆ. ಕೆಲಸದ ಹೊರೆ ಬಳಲುತ್ತಿದ್ದ ಯುವತಿಗೆ ಸರಿಯಾಗಿ ಊಟ ತಿಂಡಿ ಮಾಡೋದಕ್ಕೆ ಆಗ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾಳೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟು ಹಾಕಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನನ್ನ ನೆಮ್ಮದಿಯನ್ನೇ ಕಳ್ಕೊಂಡಿದ್ದೇನೆ: ವರ್ಕ್‌ಲೈಫ್‌ ಬಗ್ಗೆ ಅಸಮಾಧಾನ ಹೊರಹಾಕಿದ ಯುವತಿ
ಸಾಂದರ್ಭಿಕ ಚಿತ್ರImage Credit source: Maskot/Getty Images
ಸಾಯಿನಂದಾ
|

Updated on: Nov 05, 2026 | 4:40 PM

Share

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಅಷ್ಟೇ ಡಬಲ್. ಹೀಗಾಗಿ ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡೋದಕ್ಕೆ ಒದ್ದಾಡ್ತಾರೆ. ಆದ್ರೆ ಇಲ್ಲೊಬ್ಬ ಯುವತಿಯದ್ದು ಅದೇ ಕಥೆ. ಕೆಲಸದ ಒತ್ತಡಕ್ಕೆ ಸಿಲುಕಿ ಈ ಯುವತಿ ಭಾವನಾತ್ಮಕವಾಗಿ ಕುಸಿದು ಹೋಗಿದ್ದಾಳೆ. ದೀರ್ಘ ಕೆಲಸದ ಸಮಯ ಬದುಕಿನ ನೆಮ್ಮದಿಯನ್ನೇ ಕಸಿದುಕೊಂಡಿದೆ ಎಂದು ತನ್ನ ಅಳಲು ತೋಡಿಕೊಂಡಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯುವತಿಗೆ ನೆಟ್ಟಿಗರು ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.

ಕೆಲ್ಸದಿಂದ ಊಟ ತಿಂಡಿ ಮಾಡೋಕೆ ಟೈಮ್ ಸಿಗ್ತಾ ಇಲ್ಲ

ಪ್ರೋಸೆಸ್ಸಿಂಗ್ ಆನ್ ರೆಕಾರ್ಡ್ (processingonrecord) ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾಳೆ. ತಡರಾತ್ರಿಯವರೆಗೆ ಕೆಲಸ, ಕೆಲಸ ಮುಗಿದ ನಂತರ ಏನನ್ನೂ ಮಾಡಲು ಆಗಲ್ಲ. ತೀರಾ ದಣಿಯುವುದರಿಂದ ಊಟ ಮಾಡಲ್ಲ. ನಿನ್ನೆ ರಾತ್ರಿ 1 ಗಂಟೆಯವರೆಗೆ ಕೆಲಸ ಮಾಡಿದೆ. ನಾನು ಊಟ ಮಾಡಲು ಸಾಧ್ಯವಾಗಲಿಲ್ಲ. ಕೆಲಸ ಮುಗಿಸುವ ಹೊತ್ತಿಗೆ ತುಂಬಾ ತಡವಾಗಿತ್ತು. ಹಸಿವಾಗಿತ್ತು, ಆದರೆ  ತುಂಬಾ ಸುಸ್ತಾಗಿದ್ದ ಕಾರಣ ಯಾವುದು ಬೇಡ ಆಗಿತ್ತು ಎಂದು ಹೇಳಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by S (@processingonrecord)

ಬೇರೆ ಉದ್ಯೋಗ ಹುಡುಕಲು ಸಮಯ ಸಿಕ್ತಾ ಇಲ್ಲ

ನನ್ನ ಕುಟುಂಬದ ಜವಾಬ್ದಾರಿ ನನ್ನ ಮೇಲಿದೆ. ನಾನು ದುಡಿಯುವುದರಿಂದ ನನ್ನ ಮನೆಯವರು ಮೂರೊತ್ತು ಹೊಟ್ಟೆ ತುಂಬಾ ತಿನ್ನಲು ಸಾಧ್ಯ. ಹೀಗಾಗಿ ರಾಜೀನಾಮೆ ನೀಡಲು ಸಾಧ್ಯವಿಲ್ಲ. ನನ್ನ ಸಮಯವನ್ನೆಲ್ಲಾ ಈ ಕೆಲಸಕ್ಕೆ ನೀಡುವುದರಿಂದ ನನಗೆ ಬೇರೆ ಕೆಲಸ ಹುಡುಕಲು ಸಾಧ್ಯವಾಗ್ತಾ ಇಲ್ಲ. ನಾನು ಕುಣಿಕೆಯಲ್ಲಿ ಸಿಲುಕಿಕೊಂಡಂತೆ ಅನಿಸುತ್ತಿದೆ, ಹೊರಬರಲು ಸಾಧ್ಯವಾಗ್ತಾ ಇಲ್ಲ ಎಂದು  ಬೇಸರ ವ್ಯಕ್ತಪಡಿಸಿದ್ದಾಳೆ.

ಇದನ್ನೂ ಓದಿ: ದೀಪಾವಳಿಗೆ ಐಫೋನ್ 16 ಗಿಫ್ಟ್ ಕೊಟ್ಟ ಕಂಪನಿ, ಉದ್ಯೋಗಿಗಳು ಫುಲ್ ಖುಷ್

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡಿ ಯುವತಿಗೆ ಸಲಹೆ ನೀಡಿದ್ದಾಳೆ. ಒಬ್ಬ ಬಳಕೆದಾರ, ನಿಮ್ಮ ಬಾಸ್ ಹೇಳುವ ಎಲ್ಲಾ ಕೆಲಸವನ್ನು ಮಾಡ್ಬೇಡಿ, ಗಡಿಗಳನ್ನು ಇರಿಸಿಕೊಳ್ಳಿ ಎಂದಿದ್ದಾರೆ. ಇನ್ನೊಬ್ಬರು, ತುರ್ತು ಕೆಲಸವೇ ಇರಲಿ, ನಿಮ್ಮ ಊಟ ತಿಂಡಿಗೆ ಸಮಯ ನಿಗದಿಸಿಪಡಿಸಿಕೊಳ್ಳಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಏನೇ ಕಮಿಟ್ಮೆಂಟ್ ಇರಲಿ, ಕೆಲಸಕ್ಕೆ ರಾಜೀನಾಮೆ ನೀಡಿ ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ