AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಣ್ಣಲ್ಲಿ ಇನ್ನು ಏನೇನ್ ನೋಡ್ಬೇಕೋ; ಕ್ಯಾಪ್ಸಿಕಂ ಬಳಸಿ ಕಪ್ ಕೇಕ್ ತಯಾರಿಸಿದ ಯುವತಿ

ಕಪ್ ಕೇಕ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಬಾಯಿ ಚಪ್ಪರಿಸಿಕೊಂಡು ತಿನ್ನುವ ಈ ಕೇಕ್‌ನ್ನು ವಿಭಿನ್ನವಾಗಿ ಮನೆಯಲ್ಲಿ ಮಾಡಬಹುದಂತೆ. ಹೌದು, ಇನ್ಸ್ಟಾಗ್ರಾಮರ್ ಒಬ್ಬಳು ವಿಭಿನ್ನವಾಗಿ ಕಪ್ ಕೇಕ್ ಮಾಡುವ ವಿಧಾನವನ್ನು ತೋರಿಸಿಕೊಟ್ಟಿದ್ದಾಳೆ. ಕಪ್ ಕೇಕ್ ಲೈನರ್ ಬದಲು ಕ್ಯಾಪ್ಸಿಕಂ ಬಳಸಿ ಕಪ್ ಕೇಕ್ ತಯಾರಿಸಿ ಈ ವಿಡಿಯೋವೊಂದು ಕೇಕ್ ಪ್ರಿಯರ ಮನಸ್ಸನ್ನು ಗೆದ್ದುಕೊಂಡಿದೆ.

ಈ ಕಣ್ಣಲ್ಲಿ ಇನ್ನು ಏನೇನ್ ನೋಡ್ಬೇಕೋ;  ಕ್ಯಾಪ್ಸಿಕಂ ಬಳಸಿ ಕಪ್ ಕೇಕ್ ತಯಾರಿಸಿದ ಯುವತಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 01, 2025 | 12:35 PM

Share

ಇತ್ತೀಚೆಗಿನ ದಿನಗಳಲ್ಲಿ ವಿಯರ್ಡ್ ಫುಡ್ ಕಾಂಬಿನೇಶನ್ (Weird food combination) ಗಳನ್ನೊಳಗೊಂಡ ಆಹಾರ ಪದಾರ್ಥಗಳ ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿರುತ್ತವೆ. ಮ್ಯಾಗಿ ಆಮ್ಲೆಟ್, ಗುಲಾಬ್ ದೋಸೆ, ಓರಿಯೋ ಪಕೋಡ, ಕಾಫಿ ಮ್ಯಾಗಿ ಹೀಗೆ ವಿಭಿನ್ನ ಪ್ರಯೋಗಗಳ ವಿಡಿಯೋವನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಇನ್ಸ್ಟಾಗ್ರಾಮ್‌ನಲ್ಲಿ ಜೂಲಿಯೆಟ್ (Juliette) ಹೆಸರಿನ ಯುವತಿಯೊಬ್ಬಳು ಕಪ್ ಕೇಕ್ (Cup Cake) ನಲ್ಲಿ ವಿಭಿನ್ನವಾದ ಪ್ರಯೋಗವನ್ನು ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾಳೆ. ಕ್ಯಾಪ್ಸಿಕಂ ಬಳಸಿ ಕಪ್ ಕೇಕ್ ತಯಾರಿಸಿದ್ದು, ಈ ವಿಭಿನ್ನವಾದ ರೆಸಿಪಿ ನೋಡಲು ಅಷ್ಟೇ ಆಕರ್ಷಕವಾಗಿದೆ.

itsmejuluette ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ಇನ್ಸ್ಟಾಗ್ರಾಮರ್ ಜೂಲಿಯೆಟ್ ಕ್ಯಾಪ್ಸಿಕಂ ಬಳಸಿ ಆರೋಗ್ಯಕರ ಹಾಗೂ ರುಚಿಕರವಾದ ಚಾಕೋಲೇಟ್ ಕಪ್ ಕೇಕ್ ಮಾಡುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾಳೆ. ಈ ವಿಡಿಯೋದಲ್ಲಿ ಕಪ್ ಲೈನರ್ ಬದಲಿಗೆ ಕ್ಯಾಪ್ಸಿಕಂ ಬಳಸಿರುವುದನ್ನು ನೋಡಬಹುದು. ಮೊದಲಿಗೆ ಕ್ಯಾಪ್ಸಿಕಂ ಎರಡು ಭಾಗವಾಗಿ ಕತ್ತರಿಸಿದ್ದು, ಅದರ ಬೀಜಗಳನ್ನು ಸಂಪೂರ್ಣವಾಗಿ ತೆಗೆದಿದ್ದಾಳೆ. ಆ ಬಳಿಕ ಒಂದು ಟ್ರೇಯಲ್ಲಿ ಕ್ಯಾಪ್ಸಿಕಂ ಇಟ್ಟು ಅದರ ಒಳಗೆ ಚಾಕೋಲೇಟ್ ಕಪ್ ಕೇಕ್ ಬ್ಯಾಟರ್ ತುಂಬಿಸಿದ್ದು ಓವನ್ ನಲ್ಲಿ ಇಟ್ಟಿದ್ದಾಳೆ. ಸ್ವಲ್ಪ ಸಮಯದಲ್ಲೇ ಆರೋಗ್ಯಕರ ಕಪ್ ಕೇಕ್ ರೆಡಿಯಾಗಿದೆ. ಕ್ಯಾಪ್ಸಿಕಂ ಆರೋಗ್ಯಕರವಾಗಿದ್ದು, ಇದು ಕಾಗದದ ತ್ಯಾಜ್ಯವನ್ನು ಕಡಿಮೆ ಮಾಡುತ್ತದೆ ಎಂದು ವಿವರಿಸುವುದನ್ನು ನೋಡಬಹುದು.

ಇದನ್ನೂ ಓದಿ : ರಸ್ತೆಯಲ್ಲಿ ಕಸ ಎಸೆದ ಯುವಕರಿಗೆ ವಿದೇಶಿ ಮಹಿಳೆಯಿಂದ ಸ್ವಚ್ಛತೆಯ ಪಾಠ, ವಿಡಿಯೋ ವೈರಲ್

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by juliette (@itsmejuliette)

ಈ ವಿಡಿಯೋವೊಂದು ಈಗಾಗಲೇ 67 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಈ ವಿಭಿನ್ನ ಕಪ್ ಕೇಕ್ ನ್ನು ಕೆಲವರು ಮೆಚ್ಚಿಕೊಂಡಿದ್ದಾರೆ. ಈ ವಿಡಿಯೋಗೆ ಬಳಕೆದಾರರು, ಇದು ನಿಜಕ್ಕೂ ಆರೋಗ್ಯಕರ ಆಯ್ಕೆಯಾಗಿದೆ ಎಂದಿದ್ದಾರೆ. ಮತ್ತೊಬ್ಬರು, ಈ ರೀತಿ ಕಪ್ ಕೇಕ್ ಯಾರು ಕೂಡ ಪ್ರಯತ್ನಿಸಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ರೀತಿ ಆಹಾರ ಪದಾರ್ಥಗಳ ವಿಭಿನ್ನವಾದ ಪ್ರಯೋಗಗಳನ್ನು ಮಾಡುವ ಮುನ್ನ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವ ಅರಿವಿರಲಿ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ