Viral Video: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಯುವಕ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ರಕ್ಷಣಾ ತಂಡ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಯುವಕ ನೀರಿನಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ಇಲ್ಲಿದೆ ನೋಡಿ.

Viral Video: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ  ಬಿದ್ದು ಸಾವು
Follow us
|

Updated on: Aug 07, 2024 | 2:02 PM

ಇತ್ತೀಚಿಗಷ್ಟೇ ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಅನ್ವಿ ಕಾಮ್ದಾರ್ ರೀಲ್​ ಮಾಡುತ್ತಿರುವ ವೇಳೆ 300 ಅಡಿ ಆಳದ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿರುವ ಸುದ್ದಿ ವರದಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಪಿಕ್‍ನಿಕ್‌ಗೆ ಬಂದಿದ್ದು, ಜಲಪಾತದ ಪಕ್ಕದಲ್ಲಿ ನಿಂತು ರೀಲ್ಸ್​​ ಮಾಡುತ್ತಿರುವ ವೇಳೆ ನೀರಿನ ರಭಸಕ್ಕೆ ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆ ರಾಜಸ್ಥಾನದ ಮೆನಾಲ್ ಜಲಪಾತದ ಬಳಿ ನಡೆದಿದೆ.

ಮೃತ ಯುವಕ ಭಿಲ್ವಾರಾ ಜಿಲ್ಲೆಯ ಭವಾನಿ ನಗರದ ನಿವಾಸಿ ಕನ್ಹಯ್ಯಾಲಾಲ್ ಬೈರ್ವಾ (26) ಎಂದು ಗುರುತಿಸಲಾಗಿದೆ. ತನ್ನ ಐದಾರು ಗೆಳೆಯರೊಂದಿಗೆ ಬಂದಿದ್ದ ರಭಸದಿಂದ ಹರಿಯುತ್ತಿದ್ದ ನೀರಿನ ಮಧ್ಯೆ ರೀಲ್ಸ್​​ ಮಾಡಲು ಮುಂದಾಗಿದ್ದಾನೆ. ಜಲಪಾತದ ನಡುವೆ ಪ್ರವಾಸಿಗರ ಸುರಕ್ಷತೆಗಾಗಿ ಸರಪಳಿಯನ್ನು ಹಾಕಲಾಗಿದ್ದು, ಈ ಸರಪಳಿಯ ಸಹಾಯದಿಂದ ಸ್ನೇಹಿತರು ಮಧ್ಯಕ್ಕೆ ಹೋಗಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಕನ್ಹಯ್ಯಾಲಾಲ್ ಕೊಚ್ಚಿ ಹೋಗಿದ್ದು, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಹಿಳೆಯ ತಲೆ ತುಂಬಾ ಹೇನು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿಸಿದ ಪ್ರಯಾಣಿಕರು

@priyarajputlive ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಯುವಕ ನೀರಿನಲ್ಲಿ ಸೆಳೆತಕ್ಕೆ ಕೊಚ್ಚಿ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಳಿಕ ಪೊಲೀಸರು ಮತ್ತು ಆಡಳಿತಾಧಿಕಾರಿಗಳ ತಂಡ ಸ್ಥಳಕ್ಕೆ ಬಂದಿದ್ದು, ಸ್ಥಳೀಯರು ಹಾಗೂ ರಕ್ಷಣಾ ತಂಡ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ