AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವಿಂಗ್ ಮಾಡುವಾಗ ಲೈವ್ ಸ್ಟ್ರೀಮ್ ಮಾಡಲು ಹೋಗಿ 1.7 ಕೋಟಿ ಮೌಲ್ಯದ ಕಾರು ಕಳೆದುಕೊಂಡ ಯೂಟ್ಯೂಬರ್

20 ವರ್ಷದ ಯೂಟ್ಯೂಬರ್ ಜ್ಯಾಕ್ ಡೊಹೆರ್ಟಿ ಮಿಯಾಮಿ ಹೆದ್ದಾರಿಯಲ್ಲಿ ತಮ್ಮ 1.7 ಕೋಟಿ ಮ್ಯಾಕ್‌ಲಾರೆನ್ ಸೂಪರ್‌ಕಾರ್ನಲ್ಲಿ ಡ್ರೈವಿಂಗ್​ ಜೊತೆಗೆ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರೇಲಿಂಗ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ.

ಅಕ್ಷತಾ ವರ್ಕಾಡಿ
|

Updated on: Oct 08, 2024 | 4:54 PM

Share

ಡ್ರೈವಿಂಗ್ ಮಾಡುತ್ತಿರುವಾಗಲೇ ಲೈವ್​​ನಲ್ಲಿ ಮಾತನಾಡುತ್ತಾ ಹೋದ ಪರಿಣಾಮ ಅಮೆರಿಕಾದ ಖ್ಯಾತ ಯೂಟ್ಯೂಬರ್ ಒಬ್ಬನ ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಯೂಟ್ಯೂಬರ್​​ ಹಾಗೂ ಆತನ ಕ್ಯಾಮೆರಾಮ್ಯಾನ್​​ಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ 1.7 ಕೋಟಿ ಮೌಲ್ಯದ ಐಷಾರಾಮಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಘಟನೆಯ ಸಂಬಂಧಿಸಿದ ದೃಶ್ಯ ಸೋಶಿಯಲ್​ ಮೀಡಿಗಳಲ್ಲಿ ವೈರಲ್​ ಆಗುತ್ತಿದೆ.

20 ವರ್ಷದ ಯೂಟ್ಯೂಬರ್ ಜ್ಯಾಕ್ ಡೊಹೆರ್ಟಿ ಮಿಯಾಮಿ ಹೆದ್ದಾರಿಯಲ್ಲಿ ತಮ್ಮ 1.7 ಕೋಟಿ ಮ್ಯಾಕ್‌ಲಾರೆನ್ ಸೂಪರ್‌ಕಾರ್ನಲ್ಲಿ ಡ್ರೈವಿಂಗ್​ ಜೊತೆಗೆ ಲೈವ್‌ಸ್ಟ್ರೀಮ್ ಮಾಡುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ರೇಲಿಂಗ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಯೂಟ್ಯೂಬರ್ ಕಿರುಚಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: 1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ಜಾಕ್ ಮೆಕ್ಲಾರೆನ್ ಸೂಪರ್ ಕಾರನ್ನು $2,02,850.10 (ಅಂದರೆ 1.7 ಕೋಟಿ ರೂ.ಗಿಂತ ಹೆಚ್ಚು)ಗೆ ಖರೀದಿಸಿದ್ದ. ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿರುವುದನ್ನು ಕಂಡು ಪಶ್ಚಾತ್ತಾಪ ಪಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. @FearedBuck ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಅ.05ರಂದು ಹಂಚಿಕೊಂಡಿರುವ ವಿಡಿಯೋ ಕೇವಲ 4 ದಿನಗಳಲ್ಲಿ 88.7 ಮಿಲಿಯನ್​ ಅಂದರೆ 8.8 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು