AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?

ಹೈದರಾಬಾದ್​ನಲ್ಲಿ ಝೊಮ್ಯಾಟೊ ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹೈದರಾಬಾದ್: ಕುದುರೆ ಏರಿ ಹೊರಟ ಝೊಮ್ಯಾಟೊ ಡೆಲಿವರಿ ಬಾಯ್​, ಯಾಕೀ ಕಸರತ್ತು?
ಝೊಮ್ಯಾಟೊ ಡೆಲಿವರಿ ಬಾಯ್Image Credit source: News 18
ನಯನಾ ರಾಜೀವ್
|

Updated on:Jan 03, 2024 | 10:43 AM

Share

ಹೈದರಾಬಾದ್​ನಲ್ಲಿ ಝೊಮ್ಯಾಟೊ(Zomato) ಡೆಲಿವರಿ ಏಜೆಂಟ್​ ಒಬ್ಬರು ಕುದುರೆ ಏರಿ ಆಹಾರ ಡೆಲಿವರಿ ಮಾಡಲು ಹೊರಟಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾಗಾದರೆ ಡೆಲಿವರಿ ಏಜೆಂಟ್​ ಈ ಕಸರತ್ತು ಮಾಡಲು ಕಾರಣವೇನೆಂಬುದರ ಕುರಿತು ಮಾಹಿತಿ ಇಲ್ಲಿದೆ. ಈ ಡೆಲಿವರಿ ಬಾಯ್ ಹೈದರಾಬಾದ್‌ನ ಜನನಿಬಿಡ ರಸ್ತೆಯಲ್ಲಿ ವಾಹನಗಳ ನಡುವೆ ಕುದುರೆ ಮೇಲೆ ಪಾರ್ಸೆಲ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಹಿಟ್​ ಆ್ಯಂಡ್​ ರನ್​ ಕಾನೂನು ಹಿಂಪಡೆಯುವ ಕುರಿತು ಟ್ರಕ್​, ಬಸ್​ ಚಾಲಕರು ದೇಶದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಈ ನಡುವೆ ಪೆಟ್ರೋಲ್​ ಬಂಕ್​ಗಳಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಮೂರು ಗಂಟೆಗಳ ಕಾಲ ಪೆಟ್ರೋಲ್​ ಬಂಕ್​ನಲ್ಲಿ ನಿಂತಿದ್ದೆ, ಬಳಿಕ ತಮ್ಮ ಬೈಕ್​ ಅನ್ನು ಪೆಟ್ರೋಲ್​ ಬಂಕ್ ಬಳಿಯೇ ಇಟ್ಟು ಕುದುರೆ ಬಾಡಿಗೆಗೆ ತೆಗೆದುಕೊಂಡು ಸವಾರಿ ಮುಂದುವರೆಸಿದೆ ಎಂದು ಹೇಳಿದ್ದಾರೆ.

ಡೆಲಿವರಿ ಬಾಯ್ ಕುದುರೆಯ ಮೇಲೆ ಆಹಾರವನ್ನು ತಲುಪಿಸಲು ಇಂಪೀರಿಯಲ್ ಹೋಟೆಲ್​ ಬಳಿಯ ಚಂಚಲಗುಡಕ್ಕೆ ಬಂದಿದ್ದಾರೆ. ಟ್ರಕ್ ಡ್ರೈವರ್‌ಗಳ ಮುಷ್ಕರದಿಂದಾಗಿ ಪೆಟ್ರೋಲ್ ಕೊರತೆ ಉಂಟಾಗಿದ್ದು, ಯುವಕನಿಗೆ ಕುದುರೆಯ ಮೇಲೆ ಆಹಾರವನ್ನು ತಲುಪಿಸುವುದು ಅನಿವಾರ್ಯವಾಗಿತ್ತು ಎಂದು ಯುವಕ ಹೇಳಿದ್ದಾನೆ.

ಮತ್ತಷ್ಟು ಓದಿ: ಮುಷ್ಕರ ವಾಪಸ್ ಪಡೆದ ಟ್ರಕ್ ಚಾಲಕರು; ಜನರು ನಿರಾಳ

ಇತ್ತೀಚೆಗೆ ಕೇಂದ್ರ ಸರ್ಕಾರವು ಹಿಟ್ ಆ್ಯಂಡ್​ ರನ್ ಕೇಸ್‌ನಲ್ಲಿ ಹೊಸ ನಿಬಂಧನೆಗಳನ್ನು ಜಾರಿಗೆ ತಂದಿದೆ.ದರ ಅಡಿಯಲ್ಲಿ 7 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಕಾನೂನು ವಿರೋಧಿಸಿ ಟ್ರಕ್​, ಬಸ್​, ಅನೇಕ ಸಂಘಟನೆಗಳು ಮುಷ್ಕರ ನಡೆಸಿದ್ದವು. ಆದರೆ, ಈ ಹೊಸ ಕಾನೂನನ್ನು ಶೀಘ್ರದಲ್ಲೇ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಈಗಷ್ಟೇ ಘೋಷಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:43 am, Wed, 3 January 24

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!