AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ

ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು ಜೊತೆಗೆ ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

Viral Post: ಭಾರೀ ಮಳೆ, ಜಲಾವೃತಗೊಂಡ ರಸ್ತೆಯಲ್ಲೂ ಆಹಾರ ತಲುಪಿಸಿದ ಡೆಲಿವರಿ ಬಾಯ್‌ಗೆ ಶ್ಲಾಘನೆ ವ್ಯಕ್ತಪಡಿಸಿದ ಗ್ರಾಹಕ
ಅಕ್ಷತಾ ವರ್ಕಾಡಿ
|

Updated on: Sep 26, 2024 | 3:50 PM

Share

ಮಳೆ ಪ್ರಾರಂಭವಾಗುತ್ತಿದ್ದಂತೆ ಹೋಟೆಲ್‌ಗಳಿಗೆ ತೆರಳುವ ಬದಲಾಗಿ ಆನ್‌ಲೈನ್‌ನಲ್ಲಿ ಫುಡ್​ ಆರ್ಡರ್​​ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಂತೆ ಸ್ವಿಗ್ಗಿ, ಝೊಮ್ಯಾಟೋದಂತಹ ಆನ್‌ಲೈನ್‌ ಫುಡ್‌ ಸರ್ವೀಸ್‌ಗಳು ಮನೆ ಬಾಗಿಲಿನ ತನಕ ಆಹಾರ ತಂದುಕೊಡುತ್ತದೆ. ಇದೀಗ ಮುಂಬೈ ವ್ಯಕ್ತಿಯೊಬ್ಬರು ಡೆಲಿವರಿ ಬಾಯ್​​ನ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಸಮಯದಲ್ಲಿ ಫುಡ್ ಡೆಲಿವರಿ ಬಾಯ್​​ ಮಳೆಯನ್ನೂ ಲೆಕ್ಕಿಸದೇ ಸರಿಯಾದ ಆಹಾರ ತಂದುಕೊಟ್ಟಿದ್ದು, ಈ ಕುರಿತು ಗ್ರಾಹಕರೊಬ್ಬರು ಫೋಸ್ಟ್​ ಹಂಚಿಕೊಂಡಿದ್ದಾರೆ. ಥ್ರೆಡ್​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಎಲ್ಲಡೆ ವೈರಲ್​​ ಆಗಿದೆ.

ಚೆಂಬೂರಿನ ರೆಸ್ಟೋರೆಂಟ್‌ನಿಂದ ನಾವು ಆರ್ಡರ್ ಮಾಡಿದ್ದೆವು. ಒಂದೆಡೆ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ಬೈಕ್ ಕೆಟ್ಟುಹೋಗಿದ್ದರೂ ಕೂಡ ತಮ್ಮ ಮನೆಯವರೆಗೂ ನಡೆದುಕೊಂಡು ಬಂದು ಆಹಾರವನ್ನು ತಂದುಕೊಟ್ಟಿದ್ದಾನೆ. ಸರಿಯಾದ ಸಮಯಕ್ಕೆ ಬಟರ್ ಚಿಕನ್ ಪಾರ್ಸೆಲ್ ಅನ್ನು ಸುರಕ್ಷಿತವಾಗಿ ತಂದು ತಲುಪಿಸಿದ್ದಾನೆ ಎಂದು ಗ್ರಾಹಕರಾದ ಮಿತ್ತಲ್ ಸ್ವಾತಿ ಇನ್‌ಸ್ಟಾಗ್ರಾಮ್ ಥ್ರೆಡ್ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

Post by @mittal.swati
View on Threads

ಇದನ್ನೂ ಓದಿ: ಮಹಿಳೆ ಕಛೇರಿಗಳಲ್ಲಿ ಕೆಲಸ ಪಡೆಯಲು ಪತಿಯ ಅನುಮತಿ ಅಗತ್ಯ; 18 ದೇಶಗಳಲ್ಲಿ ಈ ನಿಯಮ ಜಾರಿಯಲ್ಲಿದೆ

mittal.swati ಎಂಬ ಖಾತೆಯಲ್ಲಿ ಪೋಸ್ಟ್​​ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ. ಜೊತೆಗೆ ಸಾಕಷ್ಟು ಜನರು ಕಾಮೆಂಟ್​ ಮೂಲಕ ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ