ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

  • TV9 Web Team
  • Published On - 12:30 PM, 10 Jan 2021
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂದು ವರಿಷ್ಠರಿಗೆ ಗೊತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಂದು ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ನಾಯಕರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಜ.16, 17ರಂದು ಬಿಜೆಪಿ ವರಿಷ್ಠರು ರಾಜ್ಯಕ್ಕೆ ಬರುತ್ತಾರೆ. ಗೃಹ ಇಲಾಖೆಯ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಅಮಿತ್​ ಷಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಕೊರೊನಾ ವ್ಯಾಕ್ಸಿನ್​ನ್ನು ಮೊದಲು ಪ್ರಧಾನಿಯೇ ಪಡೆಯಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ಪ್ರಧಾನಿ ಮೋದಿಯವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬೇಡಿ. ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಿವಿಮಾತು ಹೇಳಿದರು. ಹಾಗೇ, ಬಿಜೆಪಿ 30 ಪರ್ಸೆಂಟ್​ ಸರ್ಕಾರ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಬಗ್ಗೆ ಮಾತನಾಡುವುದೇ ಅಪ್ರಸ್ತುತ, ಅಪಹಾಸ್ಯ ಎಂದರು.

ಫೆಬ್ರವರಿ 1ರಂದು ಬಜೆಟ್​
ಇನ್ನು ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್ 8ರಿಂದ ಏ.8ರವರೆಗೆ ಬಜೆಟ್‌ನ 2ನೇ ಸೆಷನ್ ನಡೆಯುವುದು. ಕರ್ನಾಟಕದ ಆದ್ಯತೆ ಪಟ್ಟಿಯನ್ನು ಈಗಾಗಲೇ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಹನುಮನ ಅನುಗ್ರಹ ಇದ್ದರೆ ಖಂಡಿತ ಸಚಿವನಾಗುತ್ತೇನೆ.. ಲಾಬಿ ಮಾಡಲ್ಲ: ಶಾಸಕ ಸೋಮಶೇಖರ ರೆಡ್ಡಿ