ಬನಶಂಕರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ಬೆಂಗಳೂರು: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಗರದ ಐತಿಹಾಸಿಕ ಬನಶಂಕರಿ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತವಾಗಿ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ಪೂಜೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಹಾಗೂ ದೇವರ ದರ್ಶನ ಪಡೆಯಲು ಭಕ್ತರ ದಂಡು ಬನಶಂಕರಿ ದೇವಸ್ಥಾನದತ್ತ ಹರಿದು ಬರ್ತಿದೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ. ಜೊತೆಗೆ, ದೇವಸ್ಥಾನದ ಪ್ರವೇಶಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ.

Related Tags:

Related Posts :

Category: