ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ, ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಮುಖ್ಯ ಕಾರ್ಯಕ್ರಮ: ನೇರಪ್ರಸಾರ -ಯಾವಾಗ?

|

Updated on: Aug 12, 2023 | 9:20 AM

Gruha Lakshmi: ಸಾಲು ಸಾಲು ಸವಾಲುಗಳ ಮಧ್ಯೆ ಕಾಂಗ್ರೆಸ್ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಮತ್ತು ಬಹುನಿರೀಕ್ಷೆಯ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸನ್ನದ್ಧವಾಗುತ್ತಿದೆ. ಯೋಜನೆಯಲ್ಲಿ ನೋಂದಣಿಯಾಗಿರುವ 1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ. ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ನೇರಪ್ರಸಾರವಾಗಲಿದೆ.

ಸಾಲು ಸಾಲು ಸವಾಲುಗಳ ಮಧ್ಯೆ ಕಾಂಗ್ರೆಸ್ ಅಧಿಕಾರಕ್ಕೇರಿದ ಮೂರು ತಿಂಗಳಲ್ಲಿ ಮೂರು ಯೋಜನೆಗಳನ್ನ ಜಾರಿ ಮಾಡಿದೆ. ಬಹುನಿರೀಕ್ಷೆಯ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲು ಸರ್ವ ಸನ್ನದ್ಧವಾಗುತ್ತಿದೆ. ಗ್ಯಾರಂಟಿಗಳನ್ನೇ ಬಂಡವಾಳ ಮಾಡಿಕೊಂಡು ಲೋಕಸಭೆ ಚುನಾವಣೆಗೆ ಹೋಗಲು ಸಿದ್ಧತೆ ಮಾಡಿಕೊಳ್ತಿರುವ ಕಾಂಗ್ರೆಸ್ ಗೃಹ ಲಕ್ಷ್ಮಿ ಯೋಜನೆಗೆ (Gruha Lakshmi Guarantee Scheme) ಅದ್ಧೂರಿ ಚಾಲನೆ ನೀಡಲು ಪ್ಲ್ಯಾನ್ ಮಾಡಿದೆ. ಆಗಸ್ಟ್ 15 ರೊಳಗೆ ಗೃಹಲಕ್ಷ್ಮಿ 2 ಸಾವಿರ ಮನೆಯೊಡತಿಯ ಕೈ ಸೇರುತ್ತೆ (Beneficiaries) ಎಂದು ಹೇಳಲಾಗ್ತಿತ್ತು. ಆದ್ರೆ ಸುದ್ದಿಗೋಷ್ಠಿ ನಡೆಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಸ್ಟ್ 27 ರಂದು ಏಕಕಾಲದಲ್ಲಿ 11 ಸಾವಿರ ಕಡೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದೇವೆ ಅಂತ ಹೇಳಿದ್ದಾರೆ. ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆಗಸ್ಟ್ 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿದೆ.

ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ. ಬೆಳಗಾವಿಯಲ್ಲಿ (Belagavi) ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೇರಪ್ರಸಾರವಾಗಲಿದೆ. ಪ್ರತಿ ಪಂಚಾಯಿತಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ವಾರ್ಡಿನಲ್ಲಿ ಸಂಭ್ರಮದಿಂದ ಆಚರಣೆ ಮಾಡುವಂತೆ ಸೂಚನೆ ನೀಡಲಾಗಿದೆ. ಜೂಮ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ವ್ಯವಸ್ಥೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Aug 12, 2023 09:18 AM