ದೆಹಲಿ ಸ್ಫೋಟ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಓರ್ವ ಶಂಕಿತ ಪೊಲೀಸ್ ವಶಕ್ಕೆ

Updated on: Nov 10, 2025 | 9:48 PM

ದೆಹಲಿಯ ಕೆಂಪುಕೋಟೆ ಬಳಿ ಕಾರಿನನಲ್ಲಿ ಇಂದು ಸಂಜೆ ಸ್ಪೋಟ ಸಂಭವಿಸಿದೆ. ಸ್ಪೋಟದಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ. 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಸ್ಫೋಟದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರಗೊಂಡು ರಸ್ತೆ ತುಂಬೆಲ್ಲಾ ಬಿದ್ದಿವೆ. ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ. ಇನ್ನು ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್​ಜಿ ತನಿಖೆ ನಡೆಸುತ್ತಿದ್ದು, ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಸದ್ಯದ ಮಾಹಿತಿ ಪ್ರಕಾರ ಓರ್ವ ಶಂಕಿತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ, (ನವೆಂಬರ್ 10): ದೆಹಲಿಯ ಕೆಂಪುಕೋಟೆ ಬಳಿ ಕಾರಿನನಲ್ಲಿ ಇಂದು ಸಂಜೆ ಸ್ಪೋಟ ಸಂಭವಿಸಿದೆ. ಸ್ಪೋಟದಿಂದಾಗಿ 10 ಮಂದಿ ಸಾವನ್ನಪ್ಪಿದ್ದಾರೆ. 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಸ್ಫೋಟದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರಗೊಂಡು ರಸ್ತೆ ತುಂಬೆಲ್ಲಾ ಬಿದ್ದಿವೆ. ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ದೇಶಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ. ಇನ್ನು ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್​ಜಿ ತನಿಖೆ ನಡೆಸುತ್ತಿದ್ದು, ಘಟನೆ ನಡೆದ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಸದ್ಯದ ಮಾಹಿತಿ ಪ್ರಕಾರ ಓರ್ವ ಶಂಕಿತನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಫೋಟ ಸಂಬಂಧ ದೆಹಲಿ ಪೊಲೀಸ್ ಕಮಿಷನರ್ ಸತೀಶ್ ಗೋಲ್ಚಾ ಮಾತನಾಡಿದ್ದು, ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್-1 ಬಳಿಯ ಸಿಗ್ನಲ್​ನಲ್ಲಿ ಕಾರು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಸ್ಫೋಟವಾಗಿದ್ದು, ಕಾರಿನಲ್ಲಿದ್ದವರು ಮೃತಪಟ್ಟಿರುವ ಸಾಧ್ಯತೆಯಿದೆ. ಸ್ಫೋಟದ ಬಗ್ಗೆ ಎನ್ಐಎ, ಎನ್ಎಸ್​ಜಿ ತನಿಖೆ ನಡೆಸುತ್ತಿದೆ. ಸ್ಫೋಟದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಸದ್ಯ ಓರ್ವ ಶಂಕಿತನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ. ಶಂಕಿತ ವಿಚಾರಣೆ ವೇಳೆ ತಿಳಿಸಿದ ಮಾಹಿತಿ ಮೇರೆಗೆ ಸ್ಫೋಟಕ ಕಾರಣ ಗೊತ್ತಾಗಲಿದೆ.

Published on: Nov 10, 2025 09:47 PM