ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!

Edited By:

Updated on: May 25, 2026 | 2:56 PM

ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಮುಕ್ತವಾಗಿ ಬಿಟ್ಟಿದ್ದಾರೆ.

ಮಂಡ್ಯ, ಮೇ 25: ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಪೈಪ್‌ಲೈನ್ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಈ ಹೆಬ್ಬಾವು, ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಮುಂದೆ ಹೋಗಲಾರದೆ ಒಂದೇ ಕಡೆ ಮಲಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು, ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಮುಕ್ತವಾಗಿ ಬಿಟ್ಟಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 25, 2026 02:27 PM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More