ತುಂಗಭದ್ರಾ ಡ್ಯಾಂನ 10 ಗೇಟ್ಗಳು ಓಪನ್; 18 ಸಾವಿರ ಕ್ಯೂಸೆಕ್ ನೀರು ರಿಲೀಸ್
ತುಂಗಭದ್ರಾ(Tungabhadra) ಜಲಾಶಯದ ಒಳಹರಿವು ಹೆಚ್ಚಿದ ಹಿನ್ನೆಲೆ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಬರೋಬ್ಬರಿ 10 ಗೇಟ್ಗಳ ಮೂಲಕ 18,686 ಕ್ಯೂಸೆಕ್ ನೀರು ನದಿಗೆ ರಿಲೀಸ್ ಮಾಡಲಾಗಿದ್ದು, ನದಿ ಪಾತ್ರಕ್ಕೆ ತೆರಳದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಕೊಪ್ಪಳ, ಜು.24: ಮಲೆನಾಡಿನಲ್ಲಿ ಭರ್ಜರಿ ಮಳೆಯಾಗುತ್ತಿದ್ದ ಪರಿಣಾಮ ತುಂಗಭದ್ರಾ(Tungabhadra) ನೀರು ತುಂಬಿದೆ. ಇದರಿಂದ ಜಲಾಶಯದ ಒಳಹರಿವು ಹೆಚ್ಚಿದ ಹಿನ್ನೆಲೆ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಬರೋಬ್ಬರಿ 10 ಗೇಟ್ಗಳ ಮೂಲಕ 18,686 ಕ್ಯೂಸೆಕ್ ನೀರು ನದಿಗೆ ರಿಲೀಸ್ ಮಾಡಲಾಗಿದ್ದು, ನದಿ ಪಾತ್ರಕ್ಕೆ ತೆರಳದಂತೆ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ತುಂಗಭದ್ರಾ ಜಲಾಶಯದ ಒಟ್ಟು ಸಾಮರ್ಥ್ಯ 105 ಟಿಎಮ್‌ಸಿ ಆಗಿದ್ದು, ಅದರಲ್ಲಿ ಈಗಾಗಲೇ 99.36 ಟಿಎಮ್‌ಸಿ ಭರ್ತಿಯಾಗಿದೆ. ಹೀಗಾಗಿ ನೀರನ್ನು ಹೊರಕ್ಕೆ ಬಿಡಲಾಗಿದೆ. ಇತ್ತ ನೀರು ಹೊರಕ್ಕೆ ಬಿಟ್ಟ ಹಿನ್ನಲೆ ಹಂಪಿ ಸ್ಮಾರಕ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನದಿಯಲ್ಲಿನ ಕೆಲ ಮಂಟಪಗಳು ಮುಳುಗಡೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಹಂಪಿ ಸ್ಮಾರಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
