AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ: ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್

ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ: ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Mar 07, 2026 | 9:17 AM

Share

ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ ಕೊಟ್ಟಿದ್ದಲ್ಲದೆ, ಕುರಿಗಳ ಕತ್ತು ಕುಯ್ದಾಗ ಬರುವ ರಕ್ತವನ್ನು ಅರ್ಚಕ ಹೀರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಇಂತಹ ಆಚರಣೆಗಳ ಬಗ್ಗೆ ಸಾಮಾಜಿಕ ವಲಯದಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಚಾಮರಾಜನಗರ, ಮಾರ್ಚ್ 7: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ. ಹಬ್ಬದ ಸಂದರ್ಭದಲ್ಲಿ ಹರಕೆ ಹೊತ್ತಿರುವ ಗ್ರಾಮಸ್ಥರು ತಮ್ಮ ಕುರಿಗಳನ್ನು ಬಲಿಯಾಗಿ ಅರ್ಪಿಸುತ್ತಾರೆ. ಕುರಿಗಳ ಕತ್ತು ಸೀಳಿ ಹರಿಯುವ ರಕ್ತವನ್ನು ಅರ್ಚಕ ಕುಡಿಯುವ ದೃಶ್ಯಗಳು ಕೂಡ ಕಂಡುಬಂದಿವೆ.

ಕುರಿಗಳ ಕತ್ತು ಸೀಳಿ ಹೊರಬರುವ ರಕ್ತವನ್ನು ಅರ್ಚಕ ಮಾದಶೆಟ್ಟಿ ಎನ್ನುವವರು ನೇರವಾಗಿ ಹೀರಿಕೊಳ್ಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಪ್ರತಿವರ್ಷ ಮಾರಿ ಹಬ್ಬದ ಸಂದರ್ಭದಲ್ಲಿ ಇದೇ ರೀತಿಯ ಆಚರಣೆ ನಡೆಯುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯ ಭಯಾನಕ ವಿಡಿಯೋ ತುಣುಕಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಗ್ರಾಮದಲ್ಲಿ ಪೀಳಿಗೆಯಿಂದಲೂ ನಡೆಯುತ್ತಿರುವ ಈ ಆಚರಣೆ ಬಗ್ಗೆ ಕೆಲವರು ಆಶ್ಚರ್ಯ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದನ್ನು ದೇವಿಯ ಆರಾಧನೆಯ ಭಾಗವೆಂದು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More