ಒಂದೇ ದಿನದಲ್ಲಿ 103 ಬೈಕ್ ಟ್ಯಾಕ್ಸಿ ಸೀಜ್: ವೈಟ್ ಬೋರ್ಡ್ ವಾಹನಗಳಿಗೆ ಎಚ್ಚರಿಕೆ ಸಂದೇಶ
ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ. ಆದರೂ ಕೋರ್ಟ್ ಆದೇಶ ಮೀರಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಕೆಲ ರ್ಯಾಪಿಡೊ, ಊಬರ್, ಓಲಾ ಬೈಕ್ ಟ್ಯಾಕ್ಸಿಗಳನ್ನು ಆರ್ ಟಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಂಗಳೂರಿನ ಮೊದಲ ದಿನವೇ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ.
ಬೆಂಗಳೂರು, (ಜೂನ್ 16): ಕರ್ನಾಟಕ ಹೈಕೋರ್ಟ್ ಆದೇಶದಂತೆ ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಅನೇಕ ದಿನದಿಂದ ಆಟೋ ಚಾಲಕರು ವರ್ಸಸ್ ಬೈಕ್ ಟ್ಯಾಕ್ಸಿಯವರ (Bike Taxi) ನಡುವಿನ ಗುದ್ದಾಟ ನಡೆಯುತ್ತಿತ್ತು. ಸದ್ಯ ಈಗ ಇದಕ್ಕೆಲ್ಲಾ ಇಂದಿನಿಂದ ಬ್ರೇಕ್ ಬಿದ್ದಿದ್ದು, ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಇಂದಿನಿಂದ ಅನಧಿಕೃತ ಬೈಕ್ ಟ್ಯಾಕ್ಸಿ ಸ್ಥಗಿತಗೊಳ್ಳಲಿದೆ. ಆದರೂ ಕೋರ್ಟ್ ಆದೇಶ ಮೀರಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಕೆಲ ರ್ಯಾಪಿಡೊ, ಊಬರ್, ಓಲಾ ಬೈಕ್ ಟ್ಯಾಕ್ಸಿಗಳನ್ನು ಆರ್ ಟಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಬೆಂಗಳೂರಿನ ಮೊದಲ ದಿನವೇ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಲಾಗಿದೆ.
ಇನ್ನು ಈ ಬಗ್ಗೆ RTO ಅಡಿಷನಲ್ ಕಮಿಷನರ್ ಮಲ್ಲಿಕಾರ್ಜುನ ಪ್ರತಿಕ್ರಿಯಿಸಿದ್ದು, ಇವತ್ತು ಒಂದೇ ದಿನ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿದ್ದೇವೆ. ಹೈಕೋರ್ಟ್ ಈಗಾಗಲೇ ಬೈಕ್ ಟ್ಯಾಕ್ಸಿ ಅನಧಿಕೃತ ಎಂದು ಆದೇಶಿಸಿದೆ. ಕಾನೂನಿನಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಅವಕಾಶವಿಲ್ಲ ಎಂದಿದೆ. ರಾಜ್ಯದಲ್ಲಿ ಇಂದಿನಿಂದ ಬೈಕ್ ಟ್ಯಾಕ್ಸಿ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದೇವೆ. ವೈಟ್ ಬೋರ್ಡ್ ವಾಹನಗಳನ್ನ ಕಮರ್ಷಿಯಲ್ ಬಳಕೆಗೆ ಅವಕಾಶವಿಲ್ಲ. ಬೈಕ್ ಮಾತ್ರವಲ್ಲ ವೈಟ್ ಬೋರ್ಡ್ ಕಾರುಗಳಿಗೆ ಸಹ ಅವಕಾಶ ಇಲ್ಲ. ವೈಟ್ ಬೋರ್ಡ್ ಕಾರುಗಳು ಕಮರ್ಷಿಯಲ್ ಬಳಕೆಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆಯೂ ಬೈಕ್ ಟ್ಯಾಕ್ಸಿಗೆ ಸಾರಿಗೆ ಇಲಾಖೆ ಅನುಮತಿ ನೀಡಿಲ್ಲ. ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶ ಕೂಡ ಇಲ್ಲ. ಹೈಕೋರ್ಟ್ ಆದೇಶ ಪಾಲಿಸದಿದ್ರೆ ಕಾರ್ಯಾಚರಣೆ ಮುಂದುವರಿಸುತ್ತೇವೆ. ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.