ಮೈಸೂರು ಅರಮನೆ ತ್ರಿನೇಶ್ವರನಿಗೆ ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಮುಖವಾಡ ಹಸ್ತಾಂತರ: ಏನಿದರ ವಿಶೇಷ? ಹೇಗಿದೆ ನೋಡಿ!

Edited By:

Updated on: Feb 14, 2026 | 9:54 AM

ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಮಹಾಶಿವರಾತ್ರಿ ಸಂಭ್ರಮಕ್ಕೆ ಸಿದ್ಧತೆ ನಡೆದಿದೆ. ಈ ದೇಗುಲದ ಶಿವಲಿಂಗಕ್ಕೆ ವರ್ಷಕ್ಕೊಮ್ಮೆ ಮಾತ್ರ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು (ಕೊಳಗ) ಧಾರಣೆ ಮಾಡಲಾಗುತ್ತದೆ. ಜಯಚಾಮರಾಜೇಂದ್ರ ಒಡೆಯರ್ ಅವರಿಂದ ಕಾಣಿಕೆಯಾಗಿ ಬಂದ ಈ ವಿಶಿಷ್ಟ ಮುಖವಾಡ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ.

ಮೈಸೂರು, ಫೆಬ್ರವರಿ 14: ಮಹಾಶಿವರಾತ್ರಿ ಹಬ್ಬದ ಸಡಗರದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶೇಷ ಆಚರಣೆಗೆ ಸಿದ್ಧತೆಗಳು ನಡೆದಿವೆ. ಮೈಸೂರು ಅರಮನೆ ಆವರಣದಲ್ಲಿರುವ ಐತಿಹಾಸಿಕ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಶಿವರಾತ್ರಿ ದಿನದಂದು ಶಿವಲಿಂಗಕ್ಕೆ ಅಪರೂಪದ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಧಾರಣೆ ಮಾಡಲಾಗುತ್ತದೆ. ಈ ಚಿನ್ನದ ಮುಖವಾಡವನ್ನು ಜಯಚಾಮರಾಜೇಂದ್ರ ಒಡೆಯರ್ ಅವರು ತಮ್ಮ ಪುತ್ರ ಶ್ರೀಕಂಠದತ್ತ ನರಸಿಂಹರಾಜ್ ಒಡೆಯರ್ ಅವರ ಜನನದ ಸಂದರ್ಭದಲ್ಲಿ ದೇಗುಲಕ್ಕೆ ಕಾಣಿಕೆಯಾಗಿ ನೀಡಿದ್ದರು. ಅತ್ಯಂತ ಆಕರ್ಷಕವಾಗಿ ಕಲಾವಿದರ ಕೈಚಳಕದಲ್ಲಿ ಮೂಡಿಬಂದಿರುವ ಈ ಮುಖವಾಡವನ್ನು ವರ್ಷಕ್ಕೆ ಒಮ್ಮೆ ಶಿವರಾತ್ರಿ ದಿನದಂದು ಮಾತ್ರ ಧರಿಸಲಾಗುತ್ತಿದ್ದು, ಭಕ್ತರಿಗೆ ದರ್ಶನದ ಅವಕಾಶವಿರುತ್ತದೆ.

ಮಂದಹಾಸದ ಮುಖ, ಗಂಗೆ ಮತ್ತು ಅರ್ಧಚಂದ್ರಾಕಾರದ ಚಿತ್ರಣವಿರುವ ಈ ಮುಖವಾಡ ಮೈಸೂರಿನ ಶಿವರಾತ್ರಿ ಆಚರಣೆಯ ಪ್ರಮುಖ ಆಕರ್ಷಣೆಯಾಗಿದೆ. ಚಾಮುಂಡೇಶ್ವರಿ ಪ್ರಾಧಿಕಾರವು ಈ ಕೊಳಗವನ್ನು ಜಿಲ್ಲಾ ಖಜಾನೆಯಿಂದ ದೇಗುಲಕ್ಕೆ ಹಸ್ತಾಂತರಿಸಿದ್ದು, ಶಿವರಾತ್ರಿ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ನಡೆದಿದೆ. ಈ ಮುಖವಾಡದ ವಿಶೇಷ ಏನು? ತ್ರಿನೇಶ್ವರನಿಗೆ ಶಿವರಾತ್ರಿ ಸಂದರ್ಭದಲ್ಲಿ ವಿಶೇಷ ಪೂಜೆ, ಅಭಿಷೇಕ ಹೇಗಿರುತ್ತೆ ಎಂಬುದರ ವಿವರಣೆ ವಿಡಿಯೋದಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More