ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ: ನೆಲಕ್ಕುರುಳಿದ 120 ಅಡಿ ಎತ್ತರದ ತೇರು

| Updated By: ಗಂಗಾಧರ​ ಬ. ಸಾಬೋಜಿ

Updated on: Apr 06, 2024 | 3:23 PM

ಜಿಲ್ಲೆಯ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ 120 ಅಡಿ ಎತ್ತರದ ತೇರು ನೆಲಕ್ಕುರುಳಿರುವಂತಹ ಘಟನೆ ನಡೆದಿದೆ. ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದೆ. ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

ಬೆಂಗಳೂರು ನಗರ, ಏಪ್ರಿಲ್​ 06: ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ 120 ಅಡಿ ಎತ್ತರದ ತೇರು ನೆಲಕ್ಕುರುಳಿರುವಂತಹ ಘಟನೆ ನಡೆದಿದೆ. ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದೆ. ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ಎತ್ತುಗಳು, ಟ್ರ್ಯಾಕ್ಟರ್​ಗಳ ಮೂಲಕ ತೇರು ಎಳೆದುಕೊಂಡು ಬರಲಾಗುತ್ತದೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ತೇರು ಬರುತ್ತಿರುವಾಗ ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 06, 2024 03:20 PM