ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಶಾರ್ಟ್ ಸರ್ಕ್ಯೂಟ್‌ಗೆ ಸುಟ್ಟು ಭಸ್ಮವಾದ ಮೂರು ಅಂಗಡಿಗಳು!

Edited By:

Updated on: Nov 09, 2026 | 12:45 PM

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಅಂಗಡಿಗಳಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ರವಿ ಎಂಬುವವರ ಪಾತ್ರೆ ಅಂಗಡಿ ಸೇರಿದಂತೆ ಅಕ್ಕಪಕ್ಕದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ದೀಪಾವಳಿ ಪೂಜೆ ನಡೆದ ಮರುದಿನ ಮುಂಜಾನೆ ಈ ಘಟನೆ ನಡೆದಿದೆ.

ಮಂಡ್ಯ, ನವೆಂಬರ್ 09: ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಈ ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಚಿನಕುರಳಿ ಗ್ರಾಮದ ಮಹದೇವ್ ಎಂಬುವರಿಗೆ ಸೇರಿದ್ದ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ರವಿ ಎಂಬುವವರ ಪಾತ್ರೆ ಅಂಗಡಿಯು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಅಷ್ಟೇ ಅಲ್ಲದೆ, ಅದರ ಅಕ್ಕಪಕ್ಕದಲ್ಲಿದ್ದ ಔಷಧಿ ಅಂಗಡಿ ಮತ್ತು ಪ್ರಾವಿಷನ್ ಸ್ಟೋರ್‌ಗಳಿಗೂ ಬೆಂಕಿ ವ್ಯಾಪಿಸಿ ಭಾರೀ ಪ್ರಮಾಣದ ಹಾನಿಯಾಗಿದೆ. ಅಗ್ನಿ ಅವಘಡದ ದೃಶ್ಯಗಳಲ್ಲಿ ಯಾವುದೇ ವಸ್ತು ಉಳಿದಿಲ್ಲ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಅಂಗಡಿಯಲ್ಲಿ ಪೂಜೆ ಸಲ್ಲಿಸಲಾಗಿತ್ತು. ಪೂಜೆಯ ನಂತರ ಮುಂಜಾನೆ ವೇಳೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದೆ. ಈ ಅಗ್ನಿ ಅವಘಡದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More