ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ: ಕೊಳೆತ ಸ್ಥಿತಿಯಲ್ಲಿ ಮತದೇಹ ಪತ್ತೆ

Edited By:

Updated on: Feb 02, 2026 | 12:49 PM

ಬೆಂಗಳೂರಿನ ತಾಳಗುಣಿಯಲ್ಲಿ 14 ವರ್ಷದ ಬಾಲಕನೋರ್ವ ಜಲಮಂಡಳಿ (BWSSB) ಪೈಪ್‌ಲೈನ್ ಸಂಪಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಾಮಗಾರಿ ಸ್ಥಳದಲ್ಲಿ ಮುಚ್ಚಳವಿಲ್ಲದೆ ತೆರೆದಿದ್ದ ಸಂಪಿಗೆ ಬಾಲಕ ಬಿದ್ದಿದ್ದ, ಮೂರು ದಿನಗಳ ನಂತರ ಕೊಳೆತ ವಾಸನೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪರಿಶೀಲಿಸಿದಾಗ ಶವ ಪತ್ತೆಯಾಗಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 02:  ತಾಳಗುಣಿ ಸಮೀಪ ಜಲಮಂಡಳಿ (BWSSB) ಕಾಮಗಾರಿ ವೇಳೆ ಇಲಾಖೆ ನಿರ್ಲಕ್ಷ್ಯಕ್ಕೆ ಬಾಲಕನೋರ್ವ ಬಲಿಯಾಗಿರುವ ಘಟನೆ ನಡೆದಿದೆ. ಕನಕಪುರ ರಸ್ತೆಯ ಪೈಪ್ಲೈನ್ ರೋಡ್​​ನಲ್ಲಿ ಕಾಮಗಾರಿ ವೇಳೆ ಮುಚ್ಚಳವಿಲ್ಲದೆ ತೆರೆದಿದ್ದ ಸಂಪಿಗೆ ಬಿದ್ದು ಪ್ರೀತಂ (14) ಮೃತಪಟ್ಟಿದ್ದಾನೆ. ತಾಳಗುಣಿಯ ನಿವಾಸಿ ರಮೇಶ್ ಅವರ ಪುತ್ರ ಪ್ರೀತಂ, ಜನವರಿ 28ರಂದು ನಾಪತ್ತೆಯಾಗಿದ್ದ. ಮೂರು ದಿನಗಳ ಕಾಲ ಕುಟುಂಬಸ್ಥರು ಬಾಲಕನ ಹುಡುಕಾಟ ನಡೆಸಿದ್ದರು. ಜನವರಿ 29ರಂದು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು. ಕಾಮಗಾರಿ ನಡೆಯುತ್ತಿದ್ದ ಸ್ಥಳದಿಂದ ಕೊಳೆತ ವಾಸನೆ ಬಂದ ಹಿನ್ನೆಲೆಯಲ್ಲಿ  ಪರಿಶೀಲಿಸಿದಾಗ ಪ್ರೀತಂ ಮೃತದೇಹ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಘಟನೆಗೆ BWSSB ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More