ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅನ್ನೇ ಕದ್ದೊಯ್ದ ಖದೀಮರು!
ನಗರದಲ್ಲಿರುವ AU ಚಿನ್ನಾಭರಣ ಅಂಗಡಿಯೊಂದರಲ್ಲಿ ಭಾರೀ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಬೀಗ ಮುರಿದು ಸುಮಾರು 140 ಕೆಜಿ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ಕುಶಲ್ ಚೌಕ್ಸೆ, ಚಿನ್ನಾಭರಣಗಳು ಸುರಕ್ಷಿತವಾಗಿವೆ.ಕಳ್ಳರು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕದ್ದೊಯ್ದಿದ್ದಾರೆ. ಕಳ್ಳರ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ರಾತ್ರಿ ವೇಳೆ ಶಟರ್ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಯಾವ ಸುಳಿವೂ ಇರದಂತೆ ಕಳ್ಳತನ ಮಾಡಿದ್ದಾರೆ. ಇದರ ಹಿಂದೆ ಯಾವುದೋ ನುರಿತ ಗ್ಯಾಂಗ್ ಇರಬಹುದೆಂಬ ಶಂಕೆ ಇದೆ. ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಚಿಕ್ಕಬಳ್ಳಾಪುರ, ಡಿಸೆಂಬರ್ 23: ನಗರದಲ್ಲಿರುವ AU ಚಿನ್ನಾಭರಣ ಅಂಗಡಿಯೊಂದರಲ್ಲಿ ಭಾರೀ ಕಳ್ಳತನ ನಡೆದಿದೆ. ಕಳ್ಳರು ನಿನ್ನೆ ರಾತ್ರಿ ಅಂಗಡಿಯ ಬೀಗ ಮುರಿದು ಸುಮಾರು 140 ಕೆಜಿ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಈ ಕುರಿತು ಮಾತನಾಡಿರುವ ಎಸ್ಪಿ ಕುಶಲ್ ಚೌಕ್ಸೆ, ಚಿನ್ನಾಭರಣಗಳು ಸುರಕ್ಷಿತವಾಗಿವೆ.ಕಳ್ಳರು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಕದ್ದೊಯ್ದಿದ್ದಾರೆ. ಕಳ್ಳರ ಪತ್ತೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ. ರಾತ್ರಿ ವೇಳೆ ಶಟರ್ ಬೀಗ ಒಡೆದು ಒಳ ನುಗ್ಗಿರುವ ಕಳ್ಳರು, ಯಾವ ಸುಳಿವೂ ಇರದಂತೆ ಕಳ್ಳತನ ಮಾಡಿದ್ದಾರೆ. ಇದರ ಹಿಂದೆ ಯಾವುದೋ ನುರಿತ ಗ್ಯಾಂಗ್ ಇರಬಹುದೆಂಬ ಶಂಕೆ ಇದೆ. ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
