AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ

ಅಂಕೋಲ: ಕುಸಿದು ಬೀಳುವ ಸ್ಥಿತಿಯಲ್ಲಿದೆ 141 ವರ್ಷಗಳ ಇತಿಹಾಸವಿರುವ ಹಾರವಾಡ ಸರ್ಕಾರಿ ಶಾಲೆ

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jul 17, 2026 | 8:59 AM

Share

Uttara Kannada news: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. 141 ವರ್ಷಗಳ ಹಳೆಯ ಈ ಶಾಲೆ ಕುಸಿಯುವ ಭೀತಿಯಲ್ಲಿದ್ದು, ಮಕ್ಕಳು ಜೀವಭಯದಲ್ಲಿ ಪಾಠ ಕೇಳುತ್ತಿದ್ದಾರೆ. ಶಿಕ್ಷಕರ ಕೊರತೆ, ಪೋಷಕರ ಆತಂಕಗಳ ನಡುವೆ ಹೊಸ ಕಟ್ಟಡ ನಿರ್ಮಾಣಕ್ಕೆ ಮನವಿ ಮಾಡಲಾಗಿದೆ.

ಕಾರವಾರ, ಜುಲೈ 17: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿರುವ 141 ವರ್ಷಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈ ಶಾಲೆ ಯಾವಾಗ ಬೇಕಾದರೂ ಕುಸಿದು ಬೀಳುವ ಅಪಾಯದಲ್ಲಿದ್ದು, ಮಕ್ಕಳು ಪ್ರತಿದಿನ ಜೀವ ಭಯದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲೆಯ ಮೇಲ್ಚಾವಣಿ ಗೆದ್ದಲು ಹಿಡಿದಿದ್ದು, ಮಣ್ಣಿನ ಗೋಡೆಗಳು ಬೀಳುವ ಹಂತದಲ್ಲಿವೆ. ಮಳೆಗಾಲದಲ್ಲಿ ಕಟ್ಟಡದ ಒಳಗಡೆ ನೀರು ಸೋರಿ, ಹುಳಗಳು ಕಾಣಿಸಿಕೊಳ್ಳುತ್ತವೆ. ಇದು ವಿದ್ಯಾರ್ಥಿಗಳ ಸುರಕ್ಷತೆಗೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ. ಈ ದುಸ್ಥಿತಿಯಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಪ್ರಸ್ತುತ ಕೇವಲ 46 ಮಕ್ಕಳಿದ್ದಾರೆ.

ಹಲವಾರು ವರ್ಷಗಳಿಂದ ಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಪೋಷಕರು ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಜನಪ್ರತಿನಿಧಿಗಳಿಗೆ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಹೊಸ ಕಟ್ಟಡ ನಿರ್ಮಿಸಿ ಮಕ್ಕಳ ಭವಿಷ್ಯವನ್ನು ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us