ಪಾಕಿಸ್ತಾನದ ಗಡಿಯಲ್ಲಿ ಮತ್ತೆ ಸಂಘರ್ಷ; 15 ಅಫ್ಘಾನ್ ನಾಗರಿಕರ ಸಾವು
ಅಫ್ಘಾನಿಸ್ತಾನದ ಸ್ಪಿನ್ ಬೋಲ್ಡಕ್ ಜಿಲ್ಲೆಯಲ್ಲಿ ಅಫಘಾನ್ ಮತ್ತು ಪಾಕಿಸ್ತಾನಿ ಪಡೆಗಳ ನಡುವಿನ ಹೊಸ ಗಡಿ ಘರ್ಷಣೆಯಲ್ಲಿ ಕನಿಷ್ಠ 15 ನಾಗರಿಕರು ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಿ ಮಾಧ್ಯಮ ವರದಿಗಳು ತಿಳಿಸಿವೆ. ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ ಅಫ್ಘಾನಿಸ್ತಾನದ 15 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರು ಅಫ್ಘಾನ್ ಸೈನಿಕರು ಕೂಡ ಮೃತಪಟ್ಟಿದ್ದಾರೆ.
ನವದೆಹಲಿ, ಅಕ್ಟೋಬರ್ 15: ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯ ಸಮೀಪವಿರುವ ಸ್ಪಿನ್ ಬೋಲ್ಡಕ್ ಜಿಲ್ಲೆಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಯಲ್ಲಿ ಅಫ್ಘಾನಿಸ್ತಾನದ (Afghanistan) 15 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರು ಅಫ್ಘಾನ್ ಸೈನಿಕರು ಕೂಡ ಮೃತಪಟ್ಟಿದ್ದಾರೆ. ಅಫ್ಘಾನ್ ಅಧಿಕಾರಿಗಳ ಪ್ರಕಾರ, ಮಂಗಳವಾರ ತಡರಾತ್ರಿ ಮತ್ತು ಬುಧವಾರ ಮುಂಜಾನೆಯವರೆಗೂ ಪರಸ್ಪರ ದಾಳಿ ಮುಂದುವರೆದಿದೆ.
ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪಾಕಿಸ್ತಾನ ಪಡೆಗಳು ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿವೆ ಎಂದು ಹೇಳಿದ್ದಾರೆ. ನಮ್ಮ 12 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಜನರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗುಂಡಿನ ದಾಳಿಯಿಂದ ಸ್ಪಿನ್ ಬೋಲ್ಡಾಕ್‌ನಲ್ಲಿ ಅಂಗಡಿಗಳು ಮತ್ತು ವ್ಯವಹಾರಗಳು ಮುಚ್ಚಲ್ಪಟ್ಟಿವೆ. ಭಾರೀ ಶೆಲ್ ದಾಳಿಯಿಂದಾಗಿ ಅನೇಕ ನಿವಾಸಿಗಳು ಆ ಸ್ಥಳದಿಂದ ಬೇರೆಡೆಗೆ ಪಲಾಯನ ಮಾಡಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ