ಶಾಲಾ ಕಟ್ಟಡದಿಂದ ಬಿದ್ದು ಬೀದರ್​​ನಲ್ಲಿ 15 ವರ್ಷದ ಬಾಲಕ ಸಾವು: ಕಾರಣ ನಿಗೂಢ

Edited By:

Updated on: Jun 10, 2026 | 12:50 PM

ಬೀದರ್‌ನ ಜನಸೇವಾ ಖಾಸಗಿ ಶಾಲೆಯಲ್ಲಿ 15 ವರ್ಷದ ಸಮೀರ್ ಎಂಬ ಬಾಲಕ ಶಾಲಾ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾನೆ. ಶಾಲಾ ಸಿಬ್ಬಂದಿ ಕಿರುಕುಳ ನೀಡಿದ್ದರಿಂದಲೇ ಆತ ಈ ಕೃತ್ಯ ಎಸಗಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ ಈ ಆರೋಪವನ್ನು ತಳ್ಳಿ ಹಾಕಿದ್ದು, ಬಾಲಕನ ಸಾವಿಗೆ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೀದರ್​​, ಜೂನ್​​ 10: LIC ಕಾಲೋನಿಯ ಜನಸೇವಾ ಖಾಸಗಿ ಶಾಲೆಯ ಕಟ್ಟಡದಿಂದ ಬಿದ್ದು 15 ವರ್ಷದ ಸಮೀರ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಮೃತ ಬಾಲಕನಾಗಿದ್ದು, ಶಾಲೆಯಲ್ಲಿ ಈತ SSLC ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಶಾಲಾ ಸಿಬ್ಬಂದಿಯ ಕಿರುಕುಳದಿಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಾಲಕನ ಕುಟುಂಬಸ್ಥರು ಶಾಲಾ ಸಿಬ್ಬಂದಿ ವಿರುದ್ಧ ಆರೋಪಿಸಿದ್ದು, ನಮ್ಮ ಅನುಮತಿ ಪಡೆಯದೆ ಬಾಲಕನ ಶವ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ. ಶಾಲೆಯಲ್ಲಿ ಕಿರುಕುಳ ನೀಡ್ತಿರುವ ಬಗ್ಗೆ ಆತ ಮನೆಯಲ್ಲಿ ಹೇಳಿಕೊಂಡಿದ್ದ ಎಂದು ದೂರಿದ್ದಾರೆ. ಆದರೆ, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ್ದಾರೆ. ನಾವು ಬಾಲಕನಿಗೆ ಕೇವಲ ಓದುವಂತೆ ಹೇಳಿದ್ದೇವೆಯೇ ಹೊರತು ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸುರೇಶ ನಾಯಕ

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More