ಕೇರಳದ ಕಾಸರಗೋಡಿನಲ್ಲಿ ಪಟಾಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Edited By: ವಿವೇಕ ಬಿರಾದಾರ

Updated on: Oct 29, 2024 | 8:39 AM

ಕೇರಳ ರಾಜ್ಯದ ಕಾಸರಗೋಡಿನಲ್ಲಿ ಭಾರಿ ಪಾಟಾಕಿ ಅವಘಡ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವದ ವೇಳೆ ದುರಂತ ಸಂಭವಿಸಿದೆ. 150ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಮಂಗಳೂರು, ಅಕ್ಟೋಬರ್​ 29: ಕೇರಳ (Kerala) ರಾಜ್ಯದ ಕಾಸರಗೋಡಿನಲ್ಲಿ (Kasaragod) ಭಾರಿ ಪಾಟಾಕಿ ಅವಘಡ (Fire crackers Blast) ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ಸೋಮವಾರ ಮಧ್ಯರಾತ್ರಿ ವೀರನಾರ್ಕವ್ ದೇವಸ್ಥಾನದಲ್ಲಿ ತೆಯ್ಯಂಕೆಟ್ಟು ಮಹೋತ್ಸವ ನಡೆಯುತ್ತಿತ್ತು. ಉತ್ಸವದ ವೇಳೆ ಪಟಾಕಿ ಸಿಡಿಸುವಾಗ, ಅಲ್ಲೇ ಇದ್ದ ಪಟಾಕಿ ಗೋದಾಮಿಗೆ ಬೆಂಕಿ ತಗುಲಿದೆ. ಪಟಾಕಿಗಳು ಬಾಂಬ್​ ರೀತಿ ಸಿಡಿದಿವೆ. ಉತ್ಸವದಲ್ಲಿ ಸೇರಿದ್ದ ಜನರ ಮೇಲೆ ಪಟಾಕಿ ಕಿಡಿ ಸಿಡಿದಿದೆ. ಕೆಲವರ ಮೈಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ 150ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ನೀಲೇಶ್ವರಂ, ಕಾಞಂಗಾಡು ಮತ್ತು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟದ ತೀವ್ರತೆಯಿಂದ ಗೋದಾಮಿನ ಗೋಡೆಗಳು ಛಿದ್ರಗೊಂಡವೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 29, 2024 08:36 AM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More