ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು

Updated on: Nov 10, 2026 | 11:33 AM

ಮುಂಬೈನ ಅಂಗಡಿಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿಗಳು ಭೀಕರವಾಗಿ ಸ್ಫೋಟಗೊಂಡ ಪರಿಣಾಮವಾಗಿ 16 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ದೀಪಾವಳಿ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮಳಿಗೆಯೊಂದರಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕವಾಗಿ ಸಂಭವಿಸಿದ ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹಾಗೂ ಗೋಡೆಗಳ ಭಾಗ ಕುಸಿದು ಬಿದ್ದಿದ್ದು, ಬಾಲಕ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾನೆ.  ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಅಂಗಡಿಗಳು ಹಾಗೂ ಸಾರ್ವಜನಿಕರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿತ್ತು.

ಮುಂಬೈ, ನವೆಂಬರ್ 10: ಮುಂಬೈನ ಅಂಗಡಿಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿಗಳು ಭೀಕರವಾಗಿ ಸ್ಫೋಟಗೊಂಡ ಪರಿಣಾಮವಾಗಿ 16 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ದೀಪಾವಳಿ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮಳಿಗೆಯೊಂದರಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕವಾಗಿ ಸಂಭವಿಸಿದ ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹಾಗೂ ಗೋಡೆಗಳ ಭಾಗ ಕುಸಿದು ಬಿದ್ದಿದ್ದು, ಬಾಲಕ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾನೆ.  ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಅಂಗಡಿಗಳು ಹಾಗೂ ಸಾರ್ವಜನಿಕರಲ್ಲಿ ಭೀತಿ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More