Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ

Updated on: Apr 17, 2025 | 6:53 AM

ಏಪ್ರಿಲ್ 17, 2025ರ ದ್ವಾದಶ ರಾಶಿಗಳ ಫಲಗಳ ಬಗ್ಗೆ ಖ್ಯಾತ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಯ ಗ್ರಹಗಳ ಶುಭಫಲ, ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಮತ್ತು ಪ್ರಯಾಣದ ಬಗ್ಗೆ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಏಪ್ರಿಲ್​ 17: ಈ ದಿನ ರಾಹುಕಾಲ 1:51 ರಿಂದ 3:24 ರವರೆಗೆ ಇದೆ. ಸರ್ವಸಿದ್ಧಿ ಕಾಲ 12:19 ರಿಂದ 1:52 ರವರೆಗೆ ಇದೆ. ರವಿ ಮೇಷ ರಾಶಿಯಲ್ಲೂ, ಚಂದ್ರ ವೃಶ್ಚಿಕ ರಾಶಿಯಲ್ಲೂ ಸಂಚಾರ ಮಾಡುತ್ತಿದೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಆದಾಯದಲ್ಲಿ ಏರಿಕೆ ಮತ್ತು ವಾಹನಯೋಗ ಶುಭವಾಗಿದೆ. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಆದರೆ ಆರ್ಥಿಕವಾಗಿ ಸ್ವಲ್ಪ ಪೋಸ್ಟ್‌ಪೋನ್ ಆಗುವ ಸಾಧ್ಯತೆ ಇದೆ. ಮಿಥುನ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಆರ್ಥಿಕವಾಗಿ ಉತ್ತಮ, ಆದರೆ ಮಾತಿನಲ್ಲಿ ಸೌಮ್ಯತೆ ಅವಶ್ಯಕ. ಉಳಿದ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ ನೋಡಿ.

 

Published on: Apr 17, 2025 06:45 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More