Nithya Bhavishya: ದಿನ ಭವಿಷ್ಯ: ಈ ರಾಶಿಯವರಿಗೆ ಕೌಟುಂಬಿಕ ಭಿನ್ನಾಭಿಪ್ರಾಯವು ಹೆಚ್ಚಾಗುವ ಸಾಧ್ಯತೆ ಇದೆ
ಬೆಳಗೆದ್ದ ತಕ್ಷಣ ಇವತ್ತು ನಮ್ಮ ಭವಿಷ್ಯ ಹೇಗಿದೆ? ಏನಾದ್ರು ಸಮಸ್ಯೆ ಆಗಲಿದೆ. ಯಾವುದಿಂದಾದರೂ ಸಮಸ್ಯೆ ಇದೆಯಾ ಎಂದು ದಿನ ಭವಿಷ್ಯ ನೋಡುವವರೇ ಹೆಚ್ಚು. ಈ ರಾಶಿಗಳು ಪ್ರತಿಯೊಂದು ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರುತ್ತವೆ. ಆಗಸ್ಟ್ 17ರ ಶನಿವಾರದ ರಾಶಿ ಭವಿಷ್ಯ ಇಲ್ಲಿದೆ.
ಶ್ರಾವಣ ಮಾಸ ಆರಂಭವಾಗಿದೆ. ಇಂದು ಶ್ರಾವಣ ಮಾಸದ ಎರಡನೇ ಶನಿವಾರ. ಈ ಶ್ರಾವಣ ಶುಭ ಮಾಸದಲ್ಲಿ ನಮ್ಮ ನಿತ್ಯ ಜೀವನದಲ್ಲಿ (Horoscope) ರಾಶಿ ಭವಿಷ್ಯವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 17) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಉತ್ತರಾಭಾದ್ರಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:52 ಗಂಟೆ, ರಾಹು ಕಾಲ ಬೆಳಿಗ್ಗೆ 09:28 ರಿಂದ ಮಧ್ಯಾಹ್ನ 11:02, ಯಮಘಂಡ ಕಾಲ ಮಧ್ಯಾಹ್ನ 02:11 ರಿಂದ ಸಂಜೆ 03:45ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:20 ರಿಂದ 07:54ರ ವರೆಗೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.