18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನನ್ನ ಹೊರಹಾಕಿದ ಮಾರ್ಷಲ್ಸ್
ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದ್ದಾರೆಂದು ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ವಿಧಾನಸಭೆ ಕಲಾಪದಿಂದ ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್ ಹೊರಡಿಸಿದರು. ಬಳಿಕ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು. ಇನ್ನು ಸ್ಫೀಕರ್ ಅವರ ಈ ಕ್ರಮಕ್ಕೆ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಇನ್ನು ಮಾರ್ಷಲ್ಸ್ ಹೇಗೆ ಎತ್ತಿಕೊಂಡು ಹೊರಹಾಕುತ್ತಿದ್ದಾರೆ ನೋಡಿ.
ಬೆಂಗಳೂರು, (ಮಾರ್ಚ್ 21): ಕಲಾಪದಲ್ಲಿ ಭಾರಿ ಗದ್ದಲ ಎಬ್ಬಿಸಿ ಸ್ಪೀಕರ್ ಪೀಠಕ್ಕೆ ಅಗೌರ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆ. ಹನಿಟ್ರ್ಯಾಪ್ (Honey Trap) ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರಿಂದು ವಿಧಾನಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಸಿಟ್ಟು ಹೊರ ಹಾಕಿದರು. ಇದರಿಂದ ಅಸಮಾಧಾನಗೊಂಡ ಸ್ಪೀಕರ್ ಯುಟಿ ಖಾದರ್ ಕಲಾಪವನ್ನು ಅಲ್ಪ ಸಮಯ ಮುಂದೂಡಿದರು. ಬಳಿಕ ಮಧ್ಯಾಹ್ನದ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಪೀಠಕ್ಕೆ ಅಪಮಾನ ಮಾಡಿದ್ದಾರೆಂದು ಬಿಜೆಪಿ 18 ಶಾಸಕರನ್ನು 6 ತಿಂಗಳ ಕಾಲ ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್ ಹೊರಡಿಸಿದರು. ಬಳಿಕ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಹೋಗಿ ಆಚೆ ಹಾಕಿದರು.