AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದ ಡಿಆರ್​ಐ ಅಧಿಕಾರಿಗಳು

ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದ ಡಿಆರ್​ಐ ಅಧಿಕಾರಿಗಳು

ಶಿವಪ್ರಸಾದ್​ ಬಿ.
| Edited By: |

Updated on: Sep 08, 2026 | 7:12 PM

Share

ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ 180 ಸ್ಟಾರ್ ಆಮೆಗಳನ್ನು ಜಪ್ತಿ ಮಾಡಿದ್ದಾರೆ. ಗಾಂಧಿನಗರದಲ್ಲಿ ಆಪರೇಷನ್ ಕೂರ್ಮಾ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಹಸಿರು ಟ್ರಾಲಿ ಬ್ಯಾಗ್‌ನಲ್ಲಿ ಬಟ್ಟೆ ಕವರ್‌ಗಳಲ್ಲಿ ಬಚ್ಚಿಟ್ಟಿದ್ದ ಆಮೆಗಳನ್ನು ಮೆಜೆಸ್ಟಿಕ್‌ನಲ್ಲಿ ಮತ್ತೊಬ್ಬರಿಗೆ ಹಸ್ತಾಂತರಿಸಲು ಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ. ಅಕ್ರಮ ಸಾಗಾಣಿಕೆಗೆ ಯತ್ನಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 08: ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡಿಆರ್​ಐ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನ ಗಾಂಧಿನಗರದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಡಿಆರ್​ಐ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 10 ಸಾವಿರ ರೂಪಾಯಿಗೆ ಆಮೆಯನ್ನು ಮಾರಾಟಕ್ಕೆ ಆರೋಪಿ ಯತ್ನಿಸಿದ್ದು, ಇವುಗಳನ್ನು ಕಲಾಸಿಪಾಳ್ಯದಿಂದ ಆರೋಪಿಗೆ ಇನ್ನೋರ್ವ ವ್ಯಕ್ತಿ ತಂದುಕೊಟ್ಟಿದ್ದ ಎನ್ನಲಾಗಿದೆ. ಇವುಗಳಿದ್ದರೆ ಅದೃಷ್ಟ ಬರುತ್ತೆ ಎಂದು ಆರೋಪಿಗಳು ಜನರನ್ನು ನಂಬಿಸುತ್ತಿದ್ದರು ಎನ್ನಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More