ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು

ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು

ಸುಷ್ಮಾ ಚಕ್ರೆ
|

Updated on: Nov 14, 2024 | 9:52 PM

ತಿರುನಲ್ವೇಲಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮವಾಗಿ 19 ವರ್ಷದ ಕಾಲೇಜು ಯುವತಿ ಸಾವನ್ನಪ್ಪಿದ್ದಾಳೆ. ಆ ಬಸ್​ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಈ ಸಾವಿನ ದೃಶ್ಯ ಸೆರೆಯಾಗಿದೆ.

ಚೆನ್ನೈ: ತಮಿಳುನಾಡಿನ ತಿರುನಲ್ವೇಲಿ ಬಳಿಯ ರಾಮಾಯಣಪಟ್ಟಿಯಲ್ಲಿ ಸ್ಕೂಟಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ವರ್ಷದ ಕಾಲೇಜು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ನೆಲ್ಲೈ ಬಳಿ ಯುವತಿಯೊಬ್ಬಳು ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಕೂಟಿಯಲ್ಲಿ ಯುವತಿ ಕಿರಿದಾದ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವಾಗ ವೇಗವಾಗಿ ಬಂದ ಬಸ್‌ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ