ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ತಿರುನಲ್ವೇಲಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ 19 ವರ್ಷದ ಕಾಲೇಜು ಯುವತಿ ಸಾವನ್ನಪ್ಪಿದ್ದಾಳೆ. ಆ ಬಸ್ನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಈ ಸಾವಿನ ದೃಶ್ಯ ಸೆರೆಯಾಗಿದೆ.
ಚೆನ್ನೈ: ತಮಿಳುನಾಡಿನ ತಿರುನಲ್ವೇಲಿ ಬಳಿಯ ರಾಮಾಯಣಪಟ್ಟಿಯಲ್ಲಿ ಸ್ಕೂಟಿಯಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ವರ್ಷದ ಕಾಲೇಜು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ನೆಲ್ಲೈ ಬಳಿ ಯುವತಿಯೊಬ್ಬಳು ದ್ವಿಚಕ್ರ ವಾಹನದಲ್ಲಿ ರಸ್ತೆ ದಾಟಲು ಯತ್ನಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಕೂಟಿಯಲ್ಲಿ ಯುವತಿ ಕಿರಿದಾದ ರಸ್ತೆಯನ್ನು ದಾಟಲು ಪ್ರಯತ್ನಿಸುತ್ತಿರುವಾಗ ವೇಗವಾಗಿ ಬಂದ ಬಸ್ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us