AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NityaBhavishya: ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ವಿಡಿಯೋ ಮೂಲಕ ತಿಳಿದುಕೊಳ್ಳಿ

NityaBhavishya: ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ವಿಡಿಯೋ ಮೂಲಕ ತಿಳಿದುಕೊಳ್ಳಿ

ಆಯೇಷಾ ಬಾನು
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 20, 2023 | 6:26 AM

ಸೋಮವಾರ 20 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ, ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಭಾನುವಾರ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಸಿದ್ಧ, ಕರಣ: ಪರಿಘ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 6:42ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:41 ರಿಂದ 2:11ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:41 ರಿಂದ 5:12ರ ವರೆಗೆ.

Published on: Mar 19, 2023 06:41 AM