AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2.34 ಕೋಟಿ ರೂ. ಹಣ ಸೀಜ್

ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ: 2.34 ಕೋಟಿ ರೂ. ಹಣ ಸೀಜ್

ರಾಮು, ಆನೇಕಲ್​
| Edited By: |

Updated on: Mar 18, 2026 | 10:21 AM

Share

ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಜೂಜುವಾಡಿ ಚೆಕ್​ಪೋಸ್ಟ್​​ನಲ್ಲಿ 2.34 ಕೋಟಿ ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ದಾಖಲೆಗಳು ಮತ್ತು ಭದ್ರತೆ ಇಲ್ಲದ ಕಾರಣ ಹಿಟಾಚಿ ಕ್ಯಾಷ್ ಮ್ಯಾನೇಜ್​ಮೆಂಟ್​ ಸರ್ವೀಸ್​ಗೆ ಸೇರಿದ ಎಟಿಎಂ ವಾಹನವನ್ನು ಚುನಾವಣಾಧಿಕಾರಿಗಳು ತಡೆದು, ಅದರಲ್ಲಿದ್ದ ನಗದನ್ನು ವಶಕ್ಕೆ ಪಡೆದಿದ್ದಾರೆ.

ಆನೇಕಲ್, ಮಾರ್ಚ್ 18: ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಜೂಜುವಾಡಿ ಚೆಕ್​ಪೋಸ್ಟ್​ನಲ್ಲಿ ಚುನಾವಣಾಧಿಕಾರಿಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದಾರೆ. ಹಿಟಾಚಿ ಕ್ಯಾಷ್ ಮ್ಯಾನೇಜ್​ಮೆಂಟ್​ ಸರ್ವೀಸ್​ಗೆ ಸೇರಿದ ಎಟಿಎಂ ವಾಹನದಲ್ಲಿ ಹಣ ಸಾಗಿಸುತ್ತಿದ್ದಾಗ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ವೇಳೆ, ದಾಖಲೆಗಳಿಲ್ಲದ 2.34 ಕೋಟಿ ರೂ. ನಗದು ಕೊಂಡೊಯ್ಯುತ್ತಿರುವುದು ಗಮನಕ್ಕೆ ಬಂದಿದ್ದು, ಅದನ್ನು ವಶಕ್ಕೆ ಪಡೆದಿದ್ದಾರೆ.

ವಾಹನ ತಡೆದು ಪರಿಶೀಲನೆ ನಡೆಸಿದಾಗ, ಹಣಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳು ಮತ್ತು ಅಗತ್ಯ ಭದ್ರತಾ ವ್ಯವಸ್ಥೆಗಳು ಇರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಸಿದ್ಧತೆಗಳ ಭಾಗವಾಗಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಅಕ್ರಮ ಹಣ ಸಾಗಾಟ ತಡೆಯಲು ಅಧಿಕಾರಿಗಳು ನಿರಂತರ ತಪಾಸಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us