ಇಂದೋರ್‌ನಲ್ಲಿ ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್; ಇಬ್ಬರು ಸಾವು, ಹಲವರಿಗೆ ಗಾಯ
ಮಧ್ಯಪ್ರದೇಶದ ಇಂದೋರ್‌ನಲ್ಲಿ ಟ್ರಕ್ ನಿಯಂತ್ರಣ ತಪ್ಪಿ ಜನರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಮಲ್ಹರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗಣಪತಿ ಚೌಕದಲ್ಲಿ ಈ ಘಟನೆ ನಡೆದಿದೆ. ಜನರಿಗೆ ಡಿಕ್ಕಿ ಹೊಡೆದ ನಂತರ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಇದು ಜನರಲ್ಲಿ ಭಯ ಹುಟ್ಟಿಸಿತು. ರಕ್ಷಣಾ ಕಾರ್ಯಾಚರಣೆಗಾಗಿ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿದೆ.
ಇಂದೋರ್, ಸೆಪ್ಟೆಂಬರ್ 15: ಇಂದು ಸಂಜೆ ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಟ್ರಕ್ ನಿಯಂತ್ರಣ ತಪ್ಪಿ ಜನರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಮಲ್ಹರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗಣಪತಿ ಚೌಕದಲ್ಲಿ ಈ ಘಟನೆ ನಡೆದಿದೆ. ಜನರಿಗೆ ಡಿಕ್ಕಿ ಹೊಡೆದ ನಂತರ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಇದು ಜನರಲ್ಲಿ ಭಯ ಹುಟ್ಟಿಸಿತು. ರಕ್ಷಣಾ ಕಾರ್ಯಾಚರಣೆಗಾಗಿ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

