ಇಂದೋರ್‌ನಲ್ಲಿ ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್; ಇಬ್ಬರು ಸಾವು, ಹಲವರಿಗೆ ಗಾಯ

Updated on: Sep 15, 2025 | 10:08 PM

ಮಧ್ಯಪ್ರದೇಶದ ಇಂದೋರ್‌ನಲ್ಲಿ ಟ್ರಕ್ ನಿಯಂತ್ರಣ ತಪ್ಪಿ ಜನರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಮಲ್ಹರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗಣಪತಿ ಚೌಕದಲ್ಲಿ ಈ ಘಟನೆ ನಡೆದಿದೆ. ಜನರಿಗೆ ಡಿಕ್ಕಿ ಹೊಡೆದ ನಂತರ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಇದು ಜನರಲ್ಲಿ ಭಯ ಹುಟ್ಟಿಸಿತು. ರಕ್ಷಣಾ ಕಾರ್ಯಾಚರಣೆಗಾಗಿ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿದೆ.

ಇಂದೋರ್, ಸೆಪ್ಟೆಂಬರ್ 15: ಇಂದು ಸಂಜೆ ಮಧ್ಯಪ್ರದೇಶದ ಇಂದೋರ್‌ನಲ್ಲಿ (Indore) ಟ್ರಕ್ ನಿಯಂತ್ರಣ ತಪ್ಪಿ ಜನರು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಮಲ್ಹರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಗಣಪತಿ ಚೌಕದಲ್ಲಿ ಈ ಘಟನೆ ನಡೆದಿದೆ. ಜನರಿಗೆ ಡಿಕ್ಕಿ ಹೊಡೆದ ನಂತರ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಇದು ಜನರಲ್ಲಿ ಭಯ ಹುಟ್ಟಿಸಿತು. ರಕ್ಷಣಾ ಕಾರ್ಯಾಚರಣೆಗಾಗಿ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More