AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಫರೂಕಾಬಾದ್‌ನ ಕೋಚಿಂಗ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು

ಉತ್ತರ ಪ್ರದೇಶದ ಫರೂಕಾಬಾದ್‌ನ ಕೋಚಿಂಗ್ ಸೆಂಟರ್‌ನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವು

ಸುಷ್ಮಾ ಚಕ್ರೆ
|

Updated on: Oct 04, 2025 | 8:15 PM

Share

ಫರೂಕಾಬಾದ್ ಕೋಚಿಂಗ್ ಸೆಂಟರ್ ಸ್ಫೋಟದಲ್ಲಿ ಗಾಯಗೊಂಡ ಐದು ಜನರನ್ನು ಲೋಹಿಯಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಸೇರಿದಂತೆ ಹಿರಿಯ ಅಧಿಕಾರಿಗಳು ಘಟನೆಯ ಬಗ್ಗೆ ಮಾಹಿತಿ ಪಡೆಯಲು ಸ್ಥಳಕ್ಕೆ ಆಗಮಿಸಿದ್ದಾರೆ.

ಫರೂಕಾಬಾದ್, ಅಕ್ಟೋಬರ್ 4: ಇಂದು ಮಧ್ಯಾಹ್ನ ಉತ್ತರ ಪ್ರದೇಶದ (Uttar Pradesh) ಫರೂಕಾಬಾದ್‌ನಲ್ಲಿರುವ ಕೋಚಿಂಗ್ ಸೆಂಟರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕೋಚಿಂಗ್ ಸೆಂಟರ್ ದಿ ಸನ್ ಕ್ಲಾಸಸ್ ಲೈಬ್ರರಿಯ ನೆಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ. ಗಾಯಗೊಂಡ 5 ಜನರನ್ನು ಲೋಹಿಯಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಬೇರೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಸ್ಫೋಟದ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ