Video: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

|

Updated on: Aug 23, 2024 | 2:48 PM

ಮಧ್ಯಾಹ್ನ ಶಾಲೆಯಿಂದ ಮನೆಗೆ ಸೈಕಲಿನಲ್ಲಿ ತೆರಳುತ್ತಿದ್ದ ಬಾಲಕರಿಬ್ಬರಿಗೆ ರಸ್ತೆಯ ಬದಿಯ ಕಂಬದಲ್ಲಿ ತೂಗಾಡುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ. ಈ ಭೀಕರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಆಂಧ್ರಪ್ರದೇಶ: ಸೈಕಲ್​​ನಲ್ಲಿ ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಇಬ್ಬರು ಮಕ್ಕಳಿಗೆ ವಿದ್ಯುತ್ ಸ್ಪರ್ಶಿಸಿದೆ. ಪರಿಣಾಮ ಒಬ್ಬ ಬಾಲಕ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಭೀಕರ ಘಟನೆ ಆಂಧ್ರಪ್ರದೇಶದ ಕಡಪಾದಲ್ಲಿ ನಡೆದಿದೆ. ಮಧ್ಯಾಹ್ನ ಊಟಕ್ಕೆಂದು ಶಾಲೆಯಿಂದ ಮನೆಗೆ ತೆರಳುತ್ತಿದ್ದ ಮಕ್ಕಳಿಗೆ ರಸ್ತೆ ಬದಿಯ ಕಂಬದಲ್ಲಿ ತೂಗಾಡುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದೆ.

ಮೃತರನ್ನು ತನ್ವೀರ್ (11) ಮತ್ತು ಮತ್ತೊಬ್ಬ ಬಾಲಕನನ್ನು ಆಡಮ್ (10) ಎಂದು ಗುರುತಿಸಲಾಗಿದೆ. ಈ ಭೀಕರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿದ್ಯುತ್ ತಂತಿ ತಗುಲಿ ಮಕ್ಕಳು ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ಅದರಲ್ಲಿ ಒಬ್ಬರಿಗೆ ಬೆಂಕಿ ತಗುಲಿದರೆ ಮತ್ತೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾನೆ. ಸ್ಥಳೀಯರು ಧಾವಿಸಿ ತಂತಿಯನ್ನು ತೆಗೆದು ಆಸ್ಪತ್ರೆಗೆ ಕರೆದೊಯ್ಯಿದಿದ್ದಾರೆ. ಆದರೆ ಒಬ್ಬ ಬಾಲಕ ಅದಾಗಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

Published On - 2:45 pm, Fri, 23 August 24

Follow us on