Video: ರೈಲಿನಲ್ಲಿ ಅಗ್ನಿ ಅವಘಡ, ಆಂಧ್ರದಲ್ಲಿ 158 ಪ್ರಯಾಣಿಕರಿದ್ದ 2 ಬೋಗಿಗಳಿಗೆ ಬೆಂಕಿ, ಓರ್ವ ಸಾವು

Updated on: Dec 29, 2025 | 8:13 AM

ವಿಶಾಖಪಟ್ಟಣಂನಿಂದ 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಗ್ನಿ ಅವಘಡ ಮಧ್ಯರಾತ್ರಿ 12.45ಕ್ಕೆ ನಡೆದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ವಿಶಾಖಪಟ್ಟಣಂ, ಡಿಸೆಂಬರ್ 29: ವಿಶಾಖಪಟ್ಟಣಂನಿಂದ 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಗ್ನಿ ಅವಘಡ ಮಧ್ಯರಾತ್ರಿ 12.45ಕ್ಕೆ ನಡೆದಿದೆ. ರೈಲು ಬೆಂಕಿ ಹೊತ್ತಿಕೊಂಡಾಗ ಒಂದು ಬೋಗಿಯಲ್ಲಿ 82 ಪ್ರಯಾಣಿಕರು ಮತ್ತು ಇನ್ನೊಂದು ಬೋಗಿಯಲ್ಲಿ 76 ಪ್ರಯಾಣಿಕರು ಇದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರನ್ನು ಚಂದ್ರಶೇಖರ್ ಸುಂದರಂ ಎಂದು ಗುರುತಿಸಲಾಗಿದೆ. ಹಾನಿಗೊಳಗಾದ ಎರಡು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಅದು ಎರ್ನಾಕುಲಂ ಕಡೆಗೆ ಸಾಗುತ್ತಿದೆ. ಹಾನಿಗೊಳಗಾದ ಬೋಗಿಗಳಲ್ಲಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ಕಳುಹಿಸಲಾಗುತ್ತದೆ. ಬೆಂಕಿಯ ಕಾರಣವನ್ನು ಕಂಡುಹಿಡಿಯಲು ಎರಡು ವಿಧಿವಿಜ್ಞಾನ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ