ಜೈಸಲ್ಮೇರ್‌ನಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ; 20 ಜನರು ಸಜೀವದಹನ

Updated on: Oct 14, 2025 | 10:53 PM

ಜೈಸಲ್ಮೇರ್ ಬಳಿ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 20 ಜನರು ಸಾವನ್ನಪ್ಪಿದ್ದಾರೆ. ಚಲಿಸುತ್ತಿದ್ದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ, ಹಲವಾರು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು. 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಜೈಸಲ್ಮೇರ್, ಅಕ್ಟೋಬರ್ 14: ರಾಜಸ್ಥಾನದ ಜೈಸಲ್ಮೇರ್ (Jaisalmer Bus Accident) ಬಳಿ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 20 ಜನರು ಸಾವನ್ನಪ್ಪಿದ್ದಾರೆ. ಚಲಿಸುತ್ತಿದ್ದ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿ, ಹಲವಾರು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು. 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಈ ದುರಂತವನ್ನು “ಅತ್ಯಂತ ಹೃದಯ ವಿದ್ರಾವಕ” ಎಂದು ಕರೆದಿದ್ದಾರೆ ಮತ್ತು ಸಂತ್ರಸ್ತರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. “ಜೈಸಲ್ಮೇರ್‌ನಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಅತ್ಯಂತ ದುರಂತ. ಈ ದುರದೃಷ್ಟಕರ ಅಪಘಾತದಿಂದ ಹಾನಿಗೊಳಗಾದ ಜನರಿಗೆ ನಾನು ನನ್ನ ಹೃತ್ಪೂರ್ವಕ ಸಂತಾಪ ಸೂಚಿಸುತ್ತೇನೆ” ಎಂದು ಭಜನ್ ಲಾಲ್ ಶರ್ಮಾ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ