AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನೌಜ್​ನಲ್ಲಿ ನಿರ್ಮಾಣ ಹಂತದ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ

ಕನ್ನೌಜ್​ನಲ್ಲಿ ನಿರ್ಮಾಣ ಹಂತದ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ

ಸುಷ್ಮಾ ಚಕ್ರೆ
|

Updated on: Jan 11, 2025 | 8:18 PM

Share

ಉತ್ತರ ಪ್ರದೇಶದ ಕನ್ನೌಜ್​ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದಿದೆ. ಈಗಾಗಲೇ ಸುಮಾರು 28 ಜನರನ್ನು ರಕ್ಷಿಸಲಾಗಿದೆ ಮತ್ತು 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಅಪಾಯದಿಂದ ಪಾರಾಗಿದ್ದಾರೆ. ಇನ್ನೂ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಸ್ವಲ್ಪ ಸಮಯದ ನಂತರ ಅವಶೇಷಗಳನ್ನು ತೆರವುಗೊಳಿಸಲಾಗುವುದು. ಈ ದುರಂತ ಘಟನೆ ನಡೆದಾಗ ರೈಲ್ವೆ ನಿಲ್ದಾಣದಲ್ಲಿ ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಸೀಲಿಂಗ್ ಸ್ಲ್ಯಾಬ್ ಇದ್ದಕ್ಕಿದ್ದಂತೆ ಎರಡನೇ ಮಹಡಿಯ ಮೇಲೆ ಬಿದ್ದಿತು.

ಕನ್ನೌಜ್: ಇಂದು ಉತ್ತರ ಪ್ರದೇಶದ ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ನಿರ್ಮಾಣ ಹಂತದ ಕಟ್ಟಡ ಕುಸಿದ ನಂತರ ಸುಮಾರು 35 ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯ ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಐದು ಕಾರ್ಮಿಕರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಘಟನೆಯಲ್ಲಿ ಕನಿಷ್ಠ 20 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಈ ದುರಂತ ಘಟನೆ ನಡೆದಾಗ ರೈಲ್ವೆ ನಿಲ್ದಾಣದಲ್ಲಿ ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಸೀಲಿಂಗ್ ಸ್ಲ್ಯಾಬ್ ಇದ್ದಕ್ಕಿದ್ದಂತೆ ಎರಡನೇ ಮಹಡಿಯ ಮೇಲೆ ಬಿದ್ದಿತು. ಸೀಲಿಂಗ್ ಕುಸಿದ ನಂತರ, ಸುಮಾರು 35-40 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು. 28 ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More