ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ: ವಿಡಿಯೋ ವೈರಲ್

Edited By:

Updated on: Jun 18, 2024 | 2:52 PM

ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಇಂತಹ ರೀಲ್ಸ್‌ ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇದೀಗ ಯುವತಿಯೋರ್ವಳು ಸಹ ಇದೇ ರೀಲ್ಸ್​ ಮಾಡಲು ಹೋಗಿ ಜೀವ ಕಳೆದುಕೊಂಡಿದ್ದಾಳೆ.

ಸಂಭಾಜಿನಗರ (ಮಹಾರಾಷ್ಟ್ರ), (ಜೂನ್ 18): ರೀಲ್ಸ್​ ಮಾಡಲು ಹೋಗಿ 25 ವರ್ಷದ ಯುವತಿ ಬಲಿಯಾಗಿದ್ದಾಳೆ. ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More