ಮೈಸೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ 26 ಎಕರೆ ಜಾಗ ರೆಡಿ ಇದೆ -ಸಂಸದ ಪ್ರತಾಪ್ ಸಿಂಹ
ಹೈವೇ ನಿರ್ಮಾಣಕ್ಕೆ 8,500 ಕೋಟಿ ವೆಚ್ಚವಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಎಂಟೂವರೆ ರೂಪಾಯಿ ಕೂಡ ನೀಡಿಲ್ಲ. ಹೈವೇ ನಿರ್ಮಿಸಿದ್ದು ಕೇಂದ್ರ ಸರ್ಕಾರ. ಹೈವೇ ಉದ್ಘಾಟನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ. ಬೇಕಾದರೆ ಹೈವೆಯಲ್ಲಿ ಓಡಾಡುವವರನ್ನು ಕೇಳಿದರೂ ರಸ್ತೆಯನ್ನು ಯಾರು ಮಾಡಿಸಿದ್ದಾರೆ ಎಂದು ಹೇಳುತ್ತಾರೆ ಎಂದು ಪ್ರತಾಪ್ ಸಿಂಹ ಗುಡುಗಿದ್ದಾರೆ.
ಮೈಸೂರು, ಡಿ.29: ಮೈಸೂರು ಬೆಂಗಳೂರು ಹೈವೇ ಜಟಾಪಟಿ ಮುಂದುವರಿದಿದೆ (Bengaluru Mysuru Expressway). ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ (Pratap Simha) ಅವರು ಹೈವೇ ಮಾಡಿಸಿದ್ದು ನಾನೇ ಎಂದು ಮತ್ತೊಮ್ಮೆ ಪುನರುಚ್ಚಾರ ಮಾಡಿದ್ದಾರೆ. ಹೈವೇ ನಿರ್ಮಾಣಕ್ಕೆ 8,500 ಕೋಟಿ ವೆಚ್ಚವಾಗಿದೆ. ಇದಕ್ಕೆ ರಾಜ್ಯ ಸರ್ಕಾರ (Karnataka Government) ಎಂಟೂವರೆ ರೂಪಾಯಿ ಕೂಡ ನೀಡಿಲ್ಲ. ಹೈವೇ ನಿರ್ಮಿಸಿದ್ದು ಕೇಂದ್ರ ಸರ್ಕಾರ. ಹೈವೇ ಉದ್ಘಾಟನೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ. ಬೇಕಾದರೆ ಹೈವೆಯಲ್ಲಿ ಓಡಾಡುವವರನ್ನು ಕೇಳಿದರೂ ರಸ್ತೆಯನ್ನು ಯಾರು ಮಾಡಿಸಿದ್ದಾರೆ ಎಂದು ಹೇಳುತ್ತಾರೆ ಎಂದು ತಿಳಿಸಿದ್ದಾರೆ.
ಇನ್ನು ಇದೇ ವೇಳೆ ಮೈಸೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ 26 ಎಕರೆ ಜಾಗ ರೆಡಿ ಇದೆ ಎಂದಿದ್ದಾರೆ. ಹಾಘೂ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣದ ಅಗತ್ಯವಿಲ್ಲ. ನಂದಿ ಬೆಟ್ಟಕ್ಕೆ ಬೇಕಾದರೆ ರೋಪ್ ವೇ ನಿರ್ಮಾಣ ಮಾಡಿಕೊಳ್ಳಲಿ. ಈ ಹಿಂದೆಯೇ ಶಾಸಕ ಜಿ.ಟಿ. ದೇವೆಗೌಡ ಹಾಗೂ ನಾವೆಲ್ಲರೂ ಸೇರಿ ಸಭೆ ನಡೆಸಿ ಇದರ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಮಾಡಲು ನಮ್ಮ ಪ್ರಬಲ ವಿರೋಧವಿದೆ. ಚಾಮುಂಡಿ ಬೆಟ್ಟ ಪ್ರೇಕ್ಷಣೀಯ ಸ್ಥಳವಲ್ಲ, ಧಾರ್ಮಿಕ ತಾಣ. ಚಾಮುಂಡಿ ಬೆಟ್ಟಕ್ಕೆ ಭಕ್ತಿ ಭಾವದಿಂದ ಹೋಗಬೇಕು ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ